8:28 PM Thursday2 - December 2021
ಬ್ರೇಕಿಂಗ್ ನ್ಯೂಸ್
ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಸಾಲು ಸಾಲಾಗಿ ಆಸ್ಪತ್ರೆ ಸೇರುತ್ತಿರುವ ಪಚ್ಚನಾಡಿ ತ್ಯಾಜ್ಯ ದುರಂತ ಸಂತ್ರಸ್ತರು: ಜಿಲ್ಲಾಧಿಕಾರಿ ಇತ್ತ… ನಾದಬ್ರಹ್ಮ ಹಂಸಲೇಖಗೆ ಹೈಕೋರ್ಟ್ ಬಿಗ್‌ ರಿಲೀಫ್ : ಪ್ರಕರಣ ದಾಖಲಾತಿಗೆ ತಡೆಯಾಜ್ಞೆ; ದೂರುದಾತರಿಗೆ… ಚಿತ್ರದುರ್ಗ: ಕಾರು- ಬೈಕ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು; ಇನ್ನೊರ್ವ ಗಂಭೀರ… ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಸಿದ್ದು… ಕಡಲನಗರಿಯಲ್ಲಿ ಮತ್ತೆ ತಲೆ ಎತ್ತಿದ ಗ್ಯಾಂಗ್ ವಾರ್; ಮಾರಕಾಸ್ತ್ರದಿಂದ ದಾಳಿ; ಓರ್ವ ಗಂಭೀರ ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಂಗಳೂರು: ಲಾರಿಯಿಂದ ಗ್ರಾನೈಟ್ ತಲೆ ಮೇಲೆ ಬಿದ್ದು ಯುವಕ ಸಾವು; ದುರ್ಘಟನೆಗೆ ಕಾರಣ ಏನು?

14/11/2021, 12:06

ಮಂಗಳೂರು(reporterkarnataka.com): ಗ್ರಾನೈಟ್ ತುಂಬಿದ ಲಾರಿಯ ಪೋಟೋ ತೆಗೆಯಲು ಹೋಗಿದ್ದ ಸಂದರ್ಭದಲ್ಲಿ ಯುವಕನ ಮೇಲೆ ಗ್ರಾನೈಟ್ ಬಿದ್ದು ಮೃತಪಟ್ಟ ಘಟನೆ ನಗರದ ಅತ್ತಾವರ ಬಳಿ ನಡೆದಿದೆ. 

ಮೃತರನ್ನು ಜೆಪ್ಪು ನಿವಾಸಿ ಹಮೀದ್ ಎಂಬವರ ಪುತ್ರ ಅಬ್ದುರ್ರಹ್ಮಾನ್ ರಿಲ್ವಾನ್(30)  ಎಂದು ಗುರುತಿಸಲಾಗಿದೆ.

ರಾಜಸ್ಥಾನದಿಂದ ಗ್ರಾನೈಟ್ ತುಂಬಿಕೊಂಡು ಬಂದಿದ್ದ ಲಾರಿಯೊಂದು ಅತ್ತಾವರ ಬಳಿಯ ಕಟ್ಟಡ ನಿರ್ಮಾಣವಾಗುತ್ತಿದ್ದ ಸ್ಥಳಕ್ಕೆ  ಬಂದಿತ್ತು. ಈ ವೇಳೆ ಕಟ್ಟಡದ ರೈಟರ್ ಆಗಿದ್ದ ರಿಲ್ವಾನ್ ರಲ್ಲಿ ಗ್ರಾನೈಟ್‌ನ ಫೋಟೊ ತೆಗೆಯಲು ಕಟ್ಟಡದ ಸೂಪರ್ ವೈಸರ್ ಸೂಚಿಸಿದ್ದರು. ಅದರಂತೆ ಫೋಟೊ ತೆಗೆಯಲು ಅವರು ಲಾರಿಯ ಹಿಂಬದಿಗೆ ತೆರಳಿದ್ದರೆನ್ನಲಾಗಿದೆ. ಈ ವೇಳೆ ಲಾರಿಯಲ್ಲಿದ್ದ ಗ್ರಾನೈಟ್ ಏಕಾಏಕಿ ರಿಲ್ವಾನ್ರ ಮೈಮೇಲೆ ಬಿದ್ದಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು