12:40 PM Saturday4 - December 2021
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ: ಓರ್ವ ಸಿಬ್ಬಂದಿಗೆ ತೀವ್ರ… ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ: ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಕೃಷಿಕರು  ರಂಗಾಪುರ: ಇದು ಅಂಗನವಾಡಿ ಕಟ್ಟಡ ನಾ? ಅಥವಾ ಸಾರ್ವಜನಿಕ ಶೌಚಾಲಯ ನಾ? ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ  ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್

ಇತ್ತೀಚಿನ ಸುದ್ದಿ

ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು: ಕೋಲಾರ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ 

15/11/2021, 20:27

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ನವೆಂಬರ್ 16 ರಿಂದ ನಾಮಪತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು , ಚುನಾವಣೆ ಸುಸಜ್ಜಿತವಾಗಿ ಯಾವುದೇ ತೊಂದರೆಯಾಗದಂತೆ ನಡೆಯಬೇಕು . ಚುನಾವಣೆ ನೀತಿ ಸಂಹಿತೆಯನ್ನು ಯಾರಾದರು ಉಲ್ಲಂಘಿಸಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಚುನಾವಣಾ ಮಾದರಿ ನೀತಿ ಸಂಹಿತೆಯ ನಿಯಮಗಳನ್ನು ಎಲ್ಲಾ ಅಧಿಕಾರಿಗಳು ತಿಳಿದುಕೊಳ್ಳಬೇಕು . ಚುನಾವಣೆ ಸಮಯದಲ್ಲಿ ಅಧಿಕಾರಿಗಳು ತುಂಬಾ ಜಾಗೃತಿ ವಹಿಸಬೇಕು . ಯಾವುದೇ ರೀತಿ ತೊಂದರೆಗಳಾದಲ್ಲಿ ಚುನಾವಣಾ ಸಮಿತಿಗೆ ತಕ್ಷಣ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಚುನಾವಣಾ ಸಂಧರ್ಭದಲ್ಲಿ ಪ್ರಚಾರಕ್ಕಾಗಿ ಹಣ , ಮಧ್ಯ ಹಾಗೂ ವಸ್ತುಗಳನ್ನು ಹಂಚಲು ಬಳಸುತ್ತಾರೆ ಎಂಬ ದೂರುಗಳಿವೆ . ಮಧ್ಯವನ್ನು ದಸ್ತಾನು ಮಾಡುವುದು, ಸರಬರಾಜು ಮಾಡುವುದು ಹಾಗೂ ಹಂಚಿಕೆ ಮಾಡುವುದನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಬೇಕು . ಪ್ರಕರಣಗಳು ಕಂಡುಬಂದಲ್ಲಿ ಅಂತವರ ವಿರುದ್ದ ಪ್ರಕರಣ ದಾಖಲಾಯಿಸಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. 

ಹಣ ಹಂಚುವುದು, ದಾಸ್ತಾನು ಮಾಡುವುದು ಹಾಗೂ ಸರಬರಾಜು ಮಾಡುವುದರ ಬಗ್ಗೆ ದೂರುಗಳು ಬಂದಲ್ಲಿ ತಕ್ಷಣ ಪರಿಶೀಲನೆ ಮಾಡಬೇಕು. 10 ಲಕ್ಷಕ್ಕಿಂತ ಕಡಿಮೆ ಇರುವ ಹಣ ಸಿಕ್ಕಿದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಮಿತಿ ಕ್ರಮಕ್ಕೆ ವಹಿಸಬೇಕು. ಸಮಿತಿಯು ಪರಿಶೀಲನೆ ನಡೆಸಿ ಹಣದ ಬಗ್ಗೆ ಕ್ರಮ ಕೈಗೊಳ್ಳುವರು . 10 ಲಕ್ಷಕ್ಕಿಂತ ಮೇಲ್ಪಟ್ಟ ಹಣ ಸಿಕ್ಕಿದಲ್ಲಿ ಆದಾಯ ತೆರಿಗೆ ಇಲಾಖೆಗೆ ವಹಿಸಬೇಕು. ಅವರು ಹಣವನ್ನು ಪರಿಶೀಲನೆ ನಡೆಸಿ ಹಣದ ಮಾಹಿತಿ ಸಿಗದಿದ್ದಲ್ಲಿ ಅವರ ವಿರುದ್ದ ಪ್ರಕರಣ ದಾಖಲಾಯಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು . ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಉಕೇಶ್ ಕುಮಾರ್ , ಉಪ ವಿಭಾಗಾಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ , ಚುನಾವಣಾ ತಹಶೀಲ್ದಾರ್ ಬಿ.ನಾಗವೇಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು