12:24 PM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಬೈಲೂರು: ಮನೆಗೆ ಸಿಡಿಲು ಬಡಿದು ವ್ಯಕ್ತಿ ದಾರುಣ ಸಾವು; ಸುಟ್ಟು ಕರಲಾದ ವಿದ್ಯುತ್ ಪರಿಕರ

16/11/2021, 00:19

ಕಾರ್ಕಳ(reporterkarnataka.com): ಬೈಲೂರು ಸಮೀಪದ ನೀರೆ ಎಂಬಲ್ಲಿ ಸೋಮವಾರ ಸಂಜೆ
ಮನೆಯೊಂದಕ್ಕೆ ಸಿಡಿಲು ಬಡಿದು ಮನೆಯಲ್ಲಿದ್ದ ವ್ಯಕ್ತಿಯೊಬ್ಬರು ದಾರುಣವಾಗಿ ಮೃತ ಪಟ್ಟಿದ್ದಾರೆ. 

ನೀರೆ ರಾಜೀವ ನಗರದ ವಾದಿರಾಜ ಆಚಾರ್ಯ(60) ಮೃತಪಟ್ಟವರು. 
ಇದೇ ಸಂದರ್ಭದಲ್ಲಿ ಅವರು ವಾಸವಾಗಿದ್ದ ಮನೆಯ ವಿದ್ಯುತ್ ಪರಿಕರಗಳು ಸುಟ್ಟು ಕರಗಲಾಗಿದೆ. ಮನೆಗೂ ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಈ ಮನೆಯ ಪರಿಸರದಲ್ಲಿ ಇರುವ ಹಲವು ಮನೆಗಳಿಗೂ ಹಾನಿ ಸಂಭವಿಸಿದೆ. ಸಿಡಿಲಿನ ಅಘಾತದಿಂದ ನೆಲದಲ್ಲಿ ಬಿದ್ದು ವಾದಿರಾಜ ಆಚಾರ್ಯ ಅವರನ್ನು ಬೈಲೂರಿನ ಆಸ್ಪತ್ರೆಯೊಂದಲ್ಲಿ ಚಿಕಿತ್ಸೆ ನೀಡಲು ಮುಂದಾಗಿದ್ದಾಗ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವ್ಯದ್ಯ ಮೂಲ ಧೃಡಪಟ್ಟಿದೆ.

ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಶವ ಮಹಜರು ನಡೆಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಪ್ರೆಭಾರ ತಹಶೀಲ್ದಾರ್ ಪುರಂದರ, ಕಂದಾಯ ನಿರೀಕ್ಷಕ ಶಿವಪ್ರಸಾದ್ ಭಟ್ ಇನ್ನಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು