11:19 AM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಅಡುಗೆ ಅನಿಲ ಕಾಳಸಂತೆಯಲ್ಲಿ ಮಾರಾಟ, ಅಕ್ರಮ ದಾಸ್ತಾನು; ಕರವೇ ಆರೋಪ

20/11/2021, 21:06

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಅಡುಗೆ ಅನಿಲವನ್ನು ಕಾಳಸಂತೆಯಲ್ಲಿ ಹಾಗೂ ನಿಗದಿತ ದರಕ್ಕಿಂತ ಅತಿ ಹೆಚ್ಚು ದರದಲ್ಲಿ ಮಾರಾಟದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ತಾಲೂಕಾಡಳಿತಕ್ಕೆ ದೂರು ನೀಡಲಾಯಿತು.ಕನ್ನಡರಕ್ಷಣ ವೇದಿಕೆ ಅಧ್ಯಕ್ಷ ಕಾಟೇರ ಹಾಲೇಶ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕರವೇ ಕಾಯಕರ್ತರು ತಹಶೀಲ್ದಾರ್ ಟಿ.ಜಗದೀಶ ಅವರಿಗೆ ಮನವಿ ಪತ್ರ ನೀಡಿದರು. ಈ ಸಂದರ್ಭದಲ್ಲಿ ಕಾಟೇರ ಹಾಲೇಶ ಮಾತನಾಡಿ, ಅನಿಲ ಸಿಲಿಂಡರ್ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಹಾಗೂ ನಿಗದಿತ ದರಕ್ಕಿಂತ ಅತಿಹೆಚ್ಚು ದರಕ್ಕೆ ಮಾರಾಟ ಮಾಡಲಾಗುತ್ತಿದೆ.

ಸಂಬಂಧಿಸಿದ ಇಲಾಖಾಧಿಕಾರಿಗಳು ಕ್ರಮ ಜರುಗಿಸಿಲ್ಲ ಎಂದು ದೂರಿದ್ದಾರೆ. 

ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಅನಧಿಕೃತವಾಗಿ ಅನಿಲ ತುಂಬಿದ ಸಿಲಿಂಡರ್ ಗಳನ್ನು ದಾಸ್ತಾನು ಮಾಡಲಾಗುತ್ತಿದೆ, ಈ ಮೂಲಕ ಜನರ ಜೀವದ ಜತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ಅನಿಲ ಸಿಲಿಂಡರ್ ಅಕ್ರಮ ದಾಸ್ತಾನು  ಮತ್ತು ಮಾರಾಟ ಸಾಗಾಣಿಕೆ ಪಟ್ಟಣ ಸೇರಿದಂತೆ ತಾಲೂಕಿನ ಬಹುತೇಕ ಗ್ರ‍ಾಮಗಳಲ್ಲಿ ಜರುಗುತ್ತಿದ್ದು,ಸಂಬಂಧಿಸಿದಂತೆ ಇಲಾಖಾಧಿಕಾರಿಗಳು ಬೆದರು ಗೊಂಬೆಗಳಂತೆ ವರ್ತಿಸುತ್ತಿದ್ದಾರೆ ಎಂದು ಹಾಲೇಶ ದೂರಿದ್ದಾರೆ. ಅಡುಗೆ ಅನಿಲ ಹೋಟೆಲ್ ಹಾಗೂ ಡಾಬಾ ಮತ್ತು ಖಾಸಗೀ ಯಾಗಿ ಬಳಕೆಗೆ ಮಾರಾಟ ಮಾಡಲಾಗುತ್ತಿದೆ. ಮನೆಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗುತ್ತಿದೆ. ಅಕ್ರಮವಾಗಿ ಸಾಗಿಸಲಾಗುತ್ತಿದೆ ಹಾಗೂ ಕಾಳಸಂತೆಯಲ್ಲಿ ಮಾರಲಾಗುತ್ತಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಹಾಡಹಗಲೇ ಅನಿಲ ಸಿಲಿಂಡರ್ ಅಕ್ರಮ ಸಾಗಿಸುತ್ತಿದ್ದರೂ ಯಾರೂ ಕ್ರಮ ಜರುಗಿಸಲಾಗುತ್ತಿಲ್ಲ. ಈ ವಿಷಯದಲ್ಲಿ ಅವರು ಅಕ್ರಮ ಅನಿಲ ಸಿಲಿಂಡರ್ ದಾಸ್ತಾನು ಸಾಗಾಣಿಕೆ ಮಾರಾಟದಲ್ಲಿ ಜಾಣ ಕುರುಡುತನ ತೋರಿದ್ದು,ಈ ಮೂಲಕ ಅವರೂ ಈ ದಂಧೆಗೆ ಮೌನ ಸಮ್ಮತಿ ಸೂಚಿಸಿದ್ದಾರೆ. ಅದನ್ನು ಪರೋಕ್ಷವಾಗಿ ಅವರು ಒಪ್ಪಿಕೊಂಡಂತಾಗಿದೆ ಎಂದು ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ ಗಲ್ಲಿ ಗಲ್ಲಿಗಳಲ್ಲಿ ಅನಿಲ ತುಂಬಿರುವ ಸಿಲಿಂಡರ್ ಗಳನ್ನು  ಎಗ್ಗಿಲ್ಲದೇ ಸಾಗಿಸಲಾಗುತ್ತಿದೆ ಮತ್ತು ಅಕ್ರಮವಾಗಿ ದಾಸ್ತಾನು ಮಾಡಲಾಗುತ್ತಿದೆ. ಯ‍ಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ದಾಸ್ತಾನು ಮಾಡಲಾಗುತ್ತಿದ್ದು,ಇದು ಬಲು ಅಪಾಯಕಾರಿಯಾದ ಅಕ್ರಮ ದಂಧೆಯಾಗಿದೆ ಇಂತಹವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕಿದೆ ಎಂದು ದಲಿತ ಮುಖಂಡರಾದ ಗೆದ್ದಲಗಟ್ಟೆ ಹನುಮೇಶ ಒತ್ತಾಯಿಸಿದ್ದಾರೆ. ಮಾಜಿ ಸೈನಿಕ ರಮೇಶ ಸೇರಿದಂತೆ ತಾಲೂಕಿನ ವಿವಿದ ಭಾಗದ ವಿವಿದ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು