9:44 PM Thursday2 - December 2021
ಬ್ರೇಕಿಂಗ್ ನ್ಯೂಸ್
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ: ಕೊಲೆ ಶಂಕೆ: ಪತಿ, ಮಾವ,… ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಸಾಲು ಸಾಲಾಗಿ ಆಸ್ಪತ್ರೆ ಸೇರುತ್ತಿರುವ ಪಚ್ಚನಾಡಿ ತ್ಯಾಜ್ಯ ದುರಂತ ಸಂತ್ರಸ್ತರು: ಜಿಲ್ಲಾಧಿಕಾರಿ ಇತ್ತ… ನಾದಬ್ರಹ್ಮ ಹಂಸಲೇಖಗೆ ಹೈಕೋರ್ಟ್ ಬಿಗ್‌ ರಿಲೀಫ್ : ಪ್ರಕರಣ ದಾಖಲಾತಿಗೆ ತಡೆಯಾಜ್ಞೆ; ದೂರುದಾತರಿಗೆ… ಚಿತ್ರದುರ್ಗ: ಕಾರು- ಬೈಕ್ ಮುಖಾಮುಖಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು; ಇನ್ನೊರ್ವ ಗಂಭೀರ… ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ಚಿತ್ರದುರ್ಗದಲ್ಲಿ ಸಿದ್ದು… ಕಡಲನಗರಿಯಲ್ಲಿ ಮತ್ತೆ ತಲೆ ಎತ್ತಿದ ಗ್ಯಾಂಗ್ ವಾರ್; ಮಾರಕಾಸ್ತ್ರದಿಂದ ದಾಳಿ; ಓರ್ವ ಗಂಭೀರ

ಇತ್ತೀಚಿನ ಸುದ್ದಿ

ತಲಪಾಡಿ ಶಾರದಾ ಕಾಲೇಜಿನ ರಾ.ಸೆ.ಯೋ ಘಟಕ ಉದ್ಘಾಟನೆ .

20/11/2021, 19:01

ವರದಿ/ಚಿತ್ರ :ಅನುಷ್ ಪಂಡಿತ್ ಮಂಗಳೂರು


ಮಂಗಳೂರು(reporterkarnatakanews):ತಲಪಾಡಿ ಶಾರದಾ ಕಾಲೇಜಿನ ರಾ.ಸೆ.ಯೋ ಘಟಕ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆಎ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ರಾಷ್ಟ್ರೀಯ ಸೇವಾ ಯೋಜನೆಯಿಂದ ವಿದ್ಯಾರ್ಥಿಗಳ ಮಾನಸಿಕ ಮಟ್ಟ ಬೆಳೆಯುತ್ತದೆ, ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಆದ್ದರಿಂದ ಕಾಲೇಜು ದಿನಗಳಲ್ಲಿ ಅಸಡ್ಡೆ ತೋರದೆ ಸಮರ್ಪಕವಾಗಿ ಎನ್ಎಸ್ಎಸ್ ನ್ನು ಬಳಸಿಕೊಳ್ಳಿ. ಗ್ರಾಮಗಳ ಅಭಿವೃದ್ಧಿಯ ಕಡೆಗೆ ಗಮನ ಹರಿಸುವುದು, ಆ ನಿಟ್ಟಿನಲ್ಲಿ ಗ್ರಾಮಗಳನ್ನು ದತ್ತು ಸ್ವೀಕರಿಸಿ ಅಲ್ಲಿ ಏಕದಿನ ಶಿಬಿರ ನಡೆಸಬೇಕು ಎಂದರು. ಶಿಬಿರ ಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪ್ರಜ್ಞೆ, ಬೆಳೆಯುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಕಾಲೇಜಿನ ಪ್ರಿನ್ಸಿಪಾಲರಾದ ಡಾ.ಮೀನಾ. ಜೆ. ಪನಿಕ್ಕರ್ ವಹಿಸಿದ್ದರು.
ಅವರು ಮಾತನಾಡಿ ಕೃಷಿಯ ಪ್ರಾಮುಖ್ಯತೆಯನ್ನು ಸ್ಥಳೀಯರಿಗೆ ಮನದಟ್ಟು ಮಾಡಲು ಎನ್ನೆಸೆಸ್ ವಿದ್ಯಾರ್ಥಿಗಳಿಂದ ಸಾಧ್ಯ . ಆರೋಗ್ಯ ಶಿಬಿರಗಳನ್ನು ನಡೆಸಿ, ಹಾಗೂ ಪೌಷ್ಟಿಕ ಆಹಾರದ ಅವಶ್ಯಕತೆಗಳ ಬಗ್ಗೆ ಅರಿವು ಮೂಡಿಸುವುದು ನಮ್ಮ ಕರ್ತವ್ಯ ಎಂದರು.


ಕಾರ್ಯಕ್ರಮದಲ್ಲಿ ರಾ.ಸೆ.ಯೋ ಯೋಜನಾಧಿಕಾರಿಗಳಾದ ಸೂರಜ್ ಎಂ. ದೇವಾಡಿಗ ಹಾಗೂ ಅಮಿತಾ ಆಳ್ವ ಉಪಸ್ಥಿತರಿದ್ದರು.ಖುಷಿ.ಪಿ ಕುಂದರ್ ಕಾರ್ಯ ಕ್ರಮ ನಿರೂಪಿಸಿ,ದಿಶಾ ಕೆ. ಬಿ ಸ್ವಾಗತಿಸಿ,ರಮ್ಯಶ್ರೀ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು