11:37 AM Tuesday30 - November 2021
ಬ್ರೇಕಿಂಗ್ ನ್ಯೂಸ್
ಕಾರ್ಕಳ : ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಆರೋಪಿ ಡಾ. ರತ್ನಾಕರ್ ಗೆ… ದಂಪತಿ ಜತೆ ಸುರತ್ಕಲ್ ಟೋಲ್ ಸಿಬ್ಬಂದಿ ಅನುಚಿತ ದುರ್ವರ್ತನೆ: ಪೋಲೀಸ್ ಕಮಿಷನರ್ ಶಶಿಕುಮಾರ್… ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ… ಕಡೂರು: ನೀರಿನ ಟ್ಯಾಂಕ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು; ಒಬ್ಬ ಗಂಭೀರ ಬೆಂಗಳೂರು: ನವಜಾತ ಹೆಣ್ಣು ಶಿಶುವನ್ನು ದೇವರ ಗುಡಿ ಮುಂದಿಟ್ಟು ಪರಾರಿ ಮೂಡಿಗೆರೆ: ಒಣ ಗಾಂಜಾ ಮಾರಾಟ; ಮಾಲು ಸಹಿತ ಆರೋಪಿ ಬಂಧನ ಕಲಬುರಗಿ ಪಾಲಿಕೆ ಕಮಿಷನರ್ ವಿರುದ್ಧ ಲವ್, ಸೆಕ್ಸ್, ದೋಖಾ ಆರೋಪ: ಕಮಿಷನರ್ ಈ… ಸೋವೇನ ಹಳ್ಳಿ, ಹಗರಿಬೊಮ್ಮನ ಹಳ್ಳಿಗೆ ಸಮರ್ಪಕ ಬಸ್ ವ್ಯವಸ್ಥೆ: ಗ್ರಾಮಸ್ಥರ ಹಕ್ಕೊತ್ತಾಯ 9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2…

ಇತ್ತೀಚಿನ ಸುದ್ದಿ

ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ

25/11/2021, 14:36

ಮಂಗಳೂರು(reporterkarnataka.com):

ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಮಂಗಳೂರಿನ ಹೆಮ್ಮೆಯ ಆಧ್ಯಾತ್ಮಿಕ ಕೇಂದ್ರ ರಾಮಕೃಷ್ಣ ಮಠಕ್ಕೆ ಮಂಗಳೂರಿನ ನಾಗರಿಕರಿಂದ ಗೌರವಾಭಿವಂದನೆ ಹಾಗೂ ಪೌರಸಮ್ಮಾನ ಕಾರ್ಯಕ್ರಮ ನ.27ರಂದು ಸಂಜೆ 6 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಗೌರವಾಭಿನಂದನಾ ಸಮಿತಿಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಸಂದರ್ಭದಲ್ಲೆ ಮಂಗಳೂರಿನಲ್ಲಿ ರಾಮಕೃಷ್ಣ ಆಶ್ರಮದ ಸ್ಥಾಪನೆಯಾಯಿತು. ಹೀಗಾಗಿ ದೇಶದ ಅಮೃತ ಮಹೋತ್ಸವ ಸಂದರ್ಭದಲ್ಲಿಯೇ ರಾಮಕೃಷ್ಣ ಮಠ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ ಎಂದರು.

ರಾಜ್ಯ ಸರಕಾರ ನೀಡಿದ ವಿಶೇಷ ಅಮೃತ ಮಹೋತ್ಸವ ರಾಜ್ಯೋತ್ಸವ ಪ್ರಶಸ್ತಿಗೆ ರಾಮಕೃಷ್ಣ ಮಿಶನ್ ಭಾಜನವಾಗಿದೆ. ಹೀಗಾಗಿ ವಿಶೇಷ ಸಂದರ್ಭದಲ್ಲಿ ರಾಮಕೃಷ್ಣ ಮಠಕ್ಕೆ ಸ್ವಚ್ಛ ಮಂಗಳೂರು ಫೌಂಡೇಶನ್ ವತಿಯಿಂದ ಗೌರವಾಭಿವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. 

 ಗೌರಾವಭಿನಂದನಾ ಸಮಿತಿಯ ದಿಲ್‌ರಾಜ್ ಆಳ್ವ, ಉಮಾನಾಥ್ ಕೋಟೆಕಾರ್, ಹರೀಶ್ ಆಚಾರ್ಯ, ಶುಭೋದಯ ಆಳ್ವ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು