5:42 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

9 ಮಂದಿ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ: ಡಾ. ರತ್ನಾಕರ್ ಬಂಧನ; 2 ದಿನ ಪೊಲೀಸ್ ಕಸ್ಟಡಿಗೆ

27/11/2021, 22:46

ಮಂಗಳೂರು(reporterkarnataka.com): ಆರೋಗ್ಯ ಇಲಾಖೆಯ 9 ಮಂದಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕುಷ್ಠ ರೋಗ ವಿಭಾಗದ ಅಧಿಕಾರಿಯಾದ ಡಾ. ರತ್ನಾಕರ್‌ ನನ್ನು ಬಂಧಿಸಲಾಗಿದ್ದು, 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಮಾಧ್ಯಮಗಳಲ್ಲಿ ಶುಕ್ರವಾರ ಡಾ. ರತ್ನಾಕರನ ರಾಸಲೀಲೆ ವೀಡಿಯೊ ಹಾಗೂ ಫೋಟೋಗಳು ಬಹಿರಂಗಗೊಳ್ಳುತ್ತಿದ್ದಂತೆ ಆರೋಪಿಯನ್ನು ಪಾಂಡೇಶ್ವರ ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದರು. ಶನಿವಾರ ಈತನ ವಿರುದ್ಧ ನಾಲ್ವರು ಮಹಿಳೆಯರು ಠಾಣೆಗೆ ಬಂದು ದೂರು ನೀಡಿದ್ದಾರೆ. ಇವರಲ್ಲಿ ಮೂವರು ಸಂತ್ರಸ್ತೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ರತ್ನಾಕರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಯನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. 

ಈಗಾಗಲೇ ಸೋರಿಕೆಯಾಗಿರುವ ವೀಡಿಯೋದಲ್ಲಿರುವಂತೆ ಆರೋಪಿಯು ಸಂತ್ರಸ್ತ ಮಹಿಳೆಯರನ್ನು ಕುಂದಾಪುರ, ಮುರ್ಡೇಶ್ವರ, ಮಡಿಕೇರಿ, ಪಿರಿಯಾಪಟ್ಟಣಕ್ಕೆ ಕರೆದೊಯ್ದಿರುವುದು ಕಂಡು ಬಂದಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ರತ್ನಾಕರ್ ಚೆಲ್ಲಾಟ ನಡೆಸಿದ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಹಿಳಾ ಸಂಘಟನೆ ಕಾರ್ಯಕರ್ತೆಯೊಬ್ಬರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಆರೋಪಿ ರತ್ನಾಕರನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇನ್‌ಸ್ಪೆಕ್ಟರ್ ರೇವತಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಯ ಮೊಬೈಲ್ ಫೋನ್‌ನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು