7:47 PM Tuesday16 - April 2024
ಬ್ರೇಕಿಂಗ್ ನ್ಯೂಸ್
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ…

ಇತ್ತೀಚಿನ ಸುದ್ದಿ

ಸರಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆಯೇ?: ಹಾಗಾದರೆ 8ರಿಂದ ದೂರು ದಾಖಲಿಸಿ

04/12/2021, 00:17

ಮಂಗಳೂರು (reporterkarnataka.com): ಇದೇ ಡಿ.8ರಿಂದ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಡಬ, ಬೆಳ್ತಂಗಡಿ, ಬಂಟ್ವಾಳ, ಮೂಡಬಿದ್ರೆ, ಪುತ್ತೂರು ಮತ್ತು ಸುಳ್ಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತಹ ದೂರುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಿದ್ದಾರೆ.

ಕಡಬ ತಾಲೂಕಿನ ದೂರುಗಳನ್ನು ಕಡಬ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಡಿಸೆಂಬರ್ 8ರ ಮಧ್ಯಾಹ್ನ 2.30ರಿಂದ ಸಂಜೆ 4.30ರ ವರೆಗೆ, ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಡಿಸೆಂಬರ್ 9ರ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಬಂಟ್ವಾಳ ತಾಲೂಕಿಗೆ ಸಂಬಂಧಿಸಿದಂತೆ ಬಂಟ್ವಾಳ ನಿರೀಕ್ಷಣಾ ಮಂದಿರದಲ್ಲಿ ಡಿಸೆಂಬರ್ 9 ರಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ, ಸುಳ್ಯ ತಾಲೂಕಿಗೆ ಸಂಬಂಧಿಸಿದಂತೆ ಅಲ್ಲಿನ ನಿರೀಕ್ಷಣಾ ಮಂದಿರದಲ್ಲಿ ಡಿಸೆಂಬರ್ 14ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಪುತ್ತೂರು ತಾಲೂಕಿಗೆ ಸಂಬಂಧಿಸಿದ ದೂರುಗಳನ್ನು ಪುತ್ತೂರು ನಿರೀಕ್ಷಣಾ ಮಂದಿರದಲ್ಲಿ ಡಿಸೆಂಬರ್ 14 ರಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ, ಮೂಡಬಿದ್ರೆ ತಾಲೂಕಿನ ನಿರೀಕ್ಷಣಾ ಮಂದಿರಲ್ಲಿ ಮೂಡಬಿದ್ರೆ ತಾಲೂಕಿಗೆ ಸಂಬಂಧಪಟ್ಟ ದೂರುಗಳನ್ನು ಡಿಸೆಂಬರ್ 15 ರಂದು  ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಸಾರ್ವಜನಿಕರಿಂದ ಸ್ವೀಕರಿಸಲಿದ್ದಾರೆ ಎಂದು  ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ಉಪಾಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು