7:21 PM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಯೇನಪೋಯ ಹಾಸ್ಟೆಲ್ ವಿದ್ಯಾರ್ಥಿಗಳ ಮಾರಾಮಾರಿ ಪ್ರಕರಣ: ಬಂಧಿತ 8 ಮಂದಿಯಲ್ಲಿ ನಾಲ್ವರು ಡ್ರಗ್ಸ್ ಸೇವನೆ

04/12/2021, 18:01

ಮಂಗಳೂರು(reporterkarnataka.com): ಗುಜ್ಜರಕೆರೆ ಸಮೀಪದ ಯೇನಪೋಯ ಶಿಕ್ಷಣ ಸಂಸ್ಥೆಗೆ ಸೇರಿದ ಹಾಸ್ಟೆಲ್ ನಲ್ಲಿ ಎರಡು ತಂಡಗಳ ನಡುವೆ ನಡೆದ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ 8 ಮಂದಿ ವಿದ್ಯಾರ್ಥಿಗಳ ಪೈಕಿ ನಾಲ್ವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ.

ಮೊಹಮ್ಮದ್‌, ವಿಮಲ್‌, ಫಹಾದ್‌‌ ಮುನಾಫ್‌‌‌, ಶಾಹೀದ್‌‌‌, ಕಾನೆ ಜಾನ್ಸನ್‌‌, ಆದರ್ಶ್‌‌, ಮೊಹಮ್ಮದ್‌ ನಾಸೀಫ್‌‌, ತಾಹೀರ್‌ ಬಂಧಿತ 8 ಮಂದಿ ವಿದ್ಯಾರ್ಥಿಗಳಾಗಿದ್ದಾರೆ. ಅವರ  ಪೈಕಿ ನಾಲ್ವರು ಡ್ರಗ್ಸ್‌‌ ಸೇವಿಸಿರುವುದು ತಿಳಿದು ಬಂದಿದೆ.

ಡಿ. 2ರಂದು ಹಾಸ್ಟೆಲ್‌ನಲ್ಲಿ ವಾಸವಿದ್ದ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಘರ್ಷಣೆ ನಡೆದಿತ್ತು. ಯೇನಪೋಯ  ಹಾಸ್ಟೆಲ್‌‌ ಬಳಿಯಲ್ಲಿ ಆದರ್ಶ್‌ ಪ್ರೇಮ್‌ ಕುಮಾರ್‌ ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಿದ್ದಾಗ ಸಿನಾನ್ ಮತ್ತು ಅದೇ ಕಾಲೇಜಿನ ಇತರ 8 ಮಂದಿ ವಿದ್ಯಾರ್ಥಿಗಳು ಇಂಟರ್ಲಾಕ್ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ಆದರ್ಶ್ ಹಾಗೂ ಮೊಹಮ್ಮದ್ ನಾಸಿಫ್ ಗಾಯಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು