9:17 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಬೋಂದೆಲ್ : ಮಣ್ಣಿನಡಿ ಸಿಲುಕಿದ ಮಹಿಳೆ ಮತ್ತು ಮಗು ; ಮಹಿಳೆ ಗಂಭೀರ, ಮಗು ಪಾರು

11/12/2021, 22:36

ಬೋಂದೆಲ್ (Reporter Karnataka)
ಮಂಗಳೂರು ನಗರದ ಹೊರವಲಯದ ಬೊಂದೇಲ್ ಕೃಷ್ಣ ನಗರದಲ್ಲಿ ತಡೆಗೋಡೆ ಕುಸಿದು ಮಗು ಹಾಗೂ ಮಹಿಳೆ ಮಣ್ಣಿನಡಿಗೆ ಸಿಲುಕಿದ ಘಟನೆ ನಡೆದಿದೆ.

ಅಲ್ಲೆ ಇದ್ದ ಸ್ಥಳೀಯರು ಹಾಗೂ ಕಾರ್ಮಿಕರು ತಕ್ಷಣ ಕಾರ್ಯಾಚರಣೆ ನಡೆಸಿದ್ದರಿಂದ ಮಗು ಪ್ರಾಣಾಪಾಯದಿಂದ ಪಾರಾಗಿದೆ ಆದರೆ ಮಹಿಳೆಯ ಸ್ಥಿತಿ ಗಂಭೀರವಾಗಿದೆ.

ಕೃಷ್ಣನಗರದಲ್ಲಿ ಪಾಲಿಕೆಯಿಂದ ನಡೆಯುತ್ತಿದ್ದ ಜಲ ಸಿರಿ ಯೋಜನೆ ಕಾಮಗಾರಿ ವೇಳೆ ತಡೆಗೋಡೆ ಕುಸಿದು ಬಿದ್ದಿದೆ. ಪರಿಣಾಮ ಉತ್ತರ ಕನ್ನಡ ಮೂಲದ ಕಾರ್ಮಿಕ ಮಹಿಳೆ ಹಾಗೂ ಮಗು ಮಣ್ಣಿನಡಿ ಹೂತು ಹೋಗಿದ್ದರು.

ಜೆಸಿಬಿ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಮಣ್ಣಿನಡಿಯಿಂದ ಇಬ್ಬರನ್ನೂ ಮೇಲೆತ್ತಲಾಗಿದೆ. ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗು ಅಪಾಯದಿಂದ ಪಾರಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು