12:25 AM Tuesday16 - April 2024
ಬ್ರೇಕಿಂಗ್ ನ್ಯೂಸ್
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ…

ಇತ್ತೀಚಿನ ಸುದ್ದಿ

ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಯೋಧ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇನ್ನಿಲ್ಲ

15/12/2021, 13:23

Reporterkarnataka.com
ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್‌ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂ‍ಪ್ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

‘ಡಿಸೆಂಬರ್‌ 8ರ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡು ಬದುಕುಳಿದಿದ್ದ ಶೌರ್ಯವಂತ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ನಮ್ಮನ್ನು ಅಗಲಿದ್ದಾರೆ. ಇಂದು ಬೆಳಿಗ್ಗೆ ಅವರು ನಿಧನರಾದರು… ‘ ಎಂದು ಭಾರತೀಯ ವಾಯು ಪಡೆ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ.

ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ವಾಯುಪಡೆಯ ಹೆಲಿಕಾಪ್ಟರ್‌ ದುರಂತದಲ್ಲಿ ವರುಣ್ ಸಿಂಗ್‌ ಗಂಭೀರವಾಗಿ ಗಾಯಗೊಂಡಿದ್ದರು.

ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್‌ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್‌ ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ಕರೆತರಲಾಗಿತ್ತು.

ಹೆಲಿಕಾಪ್ಟರ್‌ ಅವಘಡದಲ್ಲಿ ಸಿಡಿಎಸ್‌ ಮುಖ್ಯಸ್ಥ ಬಿಪಿನ್‌ ರಾವತ್‌ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು