5:12 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಅತ್ಯಾಚಾರ ಕುರಿತು ಸದನದಲ್ಲಿ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೋರಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ 

17/12/2021, 21:48

ಬೆಂಗಳೂರು(reporterkarnataka.com): ವಿಧಾನ ಮಂಡಲದ ಅಧಿವೇಶನದಲ್ಲಿ ಕಾಂಗ್ರೆಸ್‌ ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌  ಅತ್ಯಾಚಾರದ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆಯ ಬಗ್ಗೆ ಕ್ಷಮೆ ಕೋರಿದ್ದಾರೆ.

‘ದೆರ್‌ ಈಸ್‌ ಎ ಸೇಯಿಂಗ್‌, ವೆನ್‌ ರೇಪ್‌ ಈಸ್‌ ಇನೆವಿಟೆಬಲ್‌ ಲೆಟ್‌ ಲೇಡೌನ್‌ ಅಂಡ್‌ ಎಂಜಾಯ್‌’ (ಅಂದರೆ, ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ) ಎಂದು 
ರಮೇಶ್ ಕುಮಾರ್ ಹೇಳಿದ್ದರು.

ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಜೆ 5ರ ವೇಳೆ ಚರ್ಚೆಗೆ ಹೆಚ್ಚಿನ ಸಮಯಬೇಕು ಎಂದು ಸದಸ್ಯರು ವಿನಂತಿಸಿದ್ದರು. ಆಗ ಸಂಜೆ 6 ಗಂಟೆಯವರೆಗೆ ಸಮಯ ಕೊಡುತ್ತೇನೆ ಎಂದು ಸ್ಪೀಕರ್‌ ಹೇಳಿದ್ದರು.

‘ಎಲ್ಲರೂ ಮಾತನಾಡಬೇಕು ಎನ್ನುತ್ತಾರೆ. ನನಗೆ ಸದನದ ಬ್ಯುಸಿನೆಸ್ ನಡೆಯುವುದು ಮುಖ್ಯ. ಇದು ನಿಮ್ಮದೇ ಸದನ, ಈಗ ನನ್ನ ಪರಿಸ್ಥಿತಿ ಹೇಗಾಗಿದೆ ಅಂದರೆ ಲೆಟ್ಸ್ ಎಂಜಾಯ್​ದ ಸಿಚುಯೇಷನ್ ಅನ್ನೋ ರೀತಿ ಆಗಿದೆ ರಮೇಶ್ ಕುಮಾರ್ ಅವರೇ’ ಎಂದು ಹೇಳಿದರು.

ತಮ್ಮ ಹೆಸರು ಪ್ರಸ್ತಾಪವಾಗಿದ್ದಕ್ಕೆ ಎದ್ದುನಿಂತು ಪ್ರತಿಕ್ರಿಯಿಸಿದ ರಮೇಶ್​ಕುಮಾರ್, ರೇಪ್ ಆದಾಗ ತಡೆಯಲು ಸಾಧ್ಯವಾಗದಿದ್ರೆ ಮಲಗಿ ಎಂಜಾಯ್ ಮಾಡಿಬಿಡಬೇಕು ಎಂದರು. ಶಾಸಕ ರಮೇಶ್ ಕುಮಾರ್ ಮಾತಿಗೆ ಸ್ಪೀಕರ್ ಕಾಗೇರಿ ನಕ್ಕರು.

ಈ ಹೇಳಿಕೆಗೆ ಸ್ಪೀಕರ್ ಕಾಗೇರಿ ಸೇರಿದಂತೆ ಸದನದಲ್ಲಿದ್ದ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಸಹಜ ವಿದ್ಯಮಾನ ಎನ್ನುವಂತೆ ವರ್ತಿಸಿದರು.

ಕೆ.ಆರ್‌. ರಮೇಶ್‌ ಕುಮಾರ್‌ ಅವರ ಅತ್ಯಾಚಾರದ ಕುರಿತು ತಾವು ನೀಡಿದ್ದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕ್ಷಮೆ ಕೋರಿದ್ದಾರೆ.

ಈ ಕುರಿತು ಗುರುವಾರ ರಾತ್ರಿ ಟ್ವೀಟ್ ಮಾಡಿರುವ ಅವರು, ‘ಅತ್ಯಾಚಾರದ’ ಕುರಿತು ಅಧಿವೇಶನದಲ್ಲಿ ನೀಡಿದ ಅಸಡ್ಡೆ ಮತ್ತು ನಿರ್ಲಕ್ಷ್ಯದ ಹೇಳಿಕೆಗೆ ಎಲ್ಲರಲ್ಲಿಯೂ ಕ್ಷಮೆಯಾಚಿಸುತ್ತೇನೆ. ಅತ್ಯಂತ ಹೇಯವಾದ ಅಪರಾಧವನ್ನು ಅಲಕ್ಷಿಸುವುದು ಅಥವಾ ಅಮುಖ್ಯವಾಗಿ ಕಾಣುವುದು ನನ್ನ ಉದ್ದೇಶವಾಗಿರಲಿಲ್ಲ, ಅದು ಮಾತಿಗೆ ಸಿದ್ಧವಿರದ ಸ್ಥಿತಿಯಲ್ಲಿ ಬಂದ ಹೇಳಿಕೆಗಳು. ಮುಂದೆ ನಾನು ನನ್ನ ಮಾತುಗಳಲ್ಲಿ ಎಚ್ಚರ ವಹಿಸುತ್ತೇನೆʼʼ ಎಂದು ವಿವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು