11:23 AM Wednesday18 - May 2022
ಬ್ರೇಕಿಂಗ್ ನ್ಯೂಸ್
ವೈದ್ಯರ ಹೂ ಕುಂಡ ಎತ್ತುವ ದಮ್ಮು ಇಲ್ಲದ ಪಾಲಿಕೆ ಆಡಳಿತ, ಅಕ್ರಮ ಕಟ್ಟಡಕ್ಕೆ… ಉಳ್ಳಾಲ: ಮಳೆಗೆ ಕಿನ್ಯಾ ಬೆಳರಿಂಗೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿತ ವಿಜಯನಗರ ಪೂಜಾರಹಳ್ಳಿ ತಾಂಡ: ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಗಾರೆ ಪಾಠ.!? ಮಧುಗುಂಡಿ: 2019ರ ಮಹಾಮಳೆ ಸಂತ್ರಸ್ತರಿಗೆ ಸರಕಾರದಿಂದ ಇನ್ನೂ ಸಿಕ್ಕಿಲ್ಲ ಮನೆಭಾಗ್ಯ! ಬಡವರ ಅನ್ನಕ್ಕೂ ಕನ್ನ: ಇಂದಿರಾ ಕ್ಯಾಂಟೀನ್ ಊಟ ಹೋಟೆಲ್ ಗಳಿಗೆ ಸಪ್ಲೈ: ದಿನಕ್ಕೆ… ಕಾಫಿನಾಡ ಬಯಲು ಸೀಮೆಯಲ್ಲಿ ಭಾರಿ ಮಳೆ ಅಬ್ಬರ: ತರೀಕೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ 2… ಮೂಡಿಗೆರೆ: ರಸ್ತೆಗೆ ಉರುಳಿದ ಬೃಹತ್ ಮರ; 2 ತಾಸು ಸಂಚಾರ ಬಂದ್; ಕಿಮೀಗಟ್ಟಲೆ… ಕರ್ನಾಟಕದಿಂದ ರಾಜ್ಯಸಭೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧೆ?: ರಾಜ್ಯದಿಂದ ಈ ಹಿಂದೆ ಇಂದಿರಾ, ಸೋನಿಯಾ… ಕೇರಳದ ಟೊಮೆಟೋ ಜ್ವರ: ಕೊಡಗಿನಲ್ಲಿ ಮುನ್ನೆಚ್ಚರಿಕಾ ಕ್ರಮ; ಗಡಿಯಲ್ಲಿ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆ ಕೆಎಸ್ಸಾರ್ಟಿಸಿ ಬಸ್ ಪಾಸ್ ಕುರಿತು ಗೊಂದಲ ಬೇಡ: ಹಳೆ ಪಾಸ್ ತೋರಿಸಿ ವಿದ್ಯಾರ್ಥಿಗಳೇ…

ಇತ್ತೀಚಿನ ಸುದ್ದಿ

ರೋಟರಿ ಕ್ಲಬ್ ವತಿಯಿಂದ ಆರಕ್ಷಕ ಮಣಿಕಂಠ ಸಹಿತ ಹಲವು ಸಾಧಕರಿಗೆ ಸನ್ಮಾನ

19/01/2022, 21:37

ಮಂಗಳೂರು :(Reporterkarnataka news) : ಮಂಗಳೂರು ಉತ್ತರ ರೋಟರಿ ಕ್ಲಬ್ ವತಿಯಿಂದ ವೃತ್ತಿಪರರಿಗೆ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಗರದ ಬಾಲ ಭವನದಲ್ಲಿ ನಡೆಯಿತು.

ಮಂಗಳೂರು ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಬಿ ಪಿ ದಿನೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಈ ಸಂದರ್ಭ ಮಂಗಳೂರು ನಗರ ಪಶ್ಚಿಮ ಪೋಲಿಸ್ ಠಾಣೆ ಪಾಂಡೇಶ್ವರದಲ್ಲಿ ಮುಖ್ಯ ಆರಕ್ಷಕರಾಗಿರುವ ಮಣಿಕಂಠ ಸೇರಿದಂತೆ
ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಉಮೇಶ್ ಶೆಟ್ಟಿ, ಸರಕಾರಿ ಲೇಡೀಗೋಷನ್ ಆಸ್ಪತ್ರೆಯ ನರ್ಸಿಂಗ್ ಆಫೀಸರ್ ಅಂಬಿಕಾ,ಮಂಗಳೂರು ಕೆ. ಎಸ್. ಅರ್. ಟಿ. ಸಿ ನಿಗಮದ ಬಸ್ ಚಾಲಕ ಹನುಮಂತ ಮೇಗಳ ಮನಿ, ಉಪ್ಪಿನಂಗಡಿ ಗೃಹ ರಕ್ಷಕ ದಳದ ಸೆಕ್ಷನ್ ಲೀಡರ್, ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ, ಕೆ.ಪಿ.ಟಿ ಉದಯ ನಗರ ಅಂಗನವಾಡಿ ಕಾರ್ಯಕರ್ತೆ ಮೋಹಿನಿ, ಪಾಂಡೇಶ್ವರ ಪ್ರಧಾನ ಅಂಚೆಕಛೇರಿಯ ಸಿಬ್ಬಂದಿ ಅನುಸೂಯ.ಪಿ ಯವರನ್ನು ಸನ್ಮಾನ ಕಾರ್ಯಕ್ರಮ ನಡೆಯಿತು.

ಕ್ಲಬ್‌ನ ಅಧ್ಯಕ್ಷ ಅರ್ ಟಿ ಎನ್ ದೇವದಾಸ್ ರಾವ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು