1:05 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಹಾಡು ನಿಲ್ಲಿಸಿದ ಗಾನ ಕೋಗಿಲೆ ; ಇಹಲೋಕ ತ್ಯಜಿಸಿದ ಭಾರತರತ್ನ ಲತಾ ಮಂಗೇಶ್ಕರ್

06/02/2022, 10:21

ಮುಂಬಾಯಿ :

ಭಾರತ ಸಿನಿಮಾ ರಂಗ ಕಂಡಂತಹ ಅದ್ಭುತ ಗಾಯಕಿ ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ. ಶಿವಸೇನೆ ಸಂಸದ ಸಂಜಯ್ ರಾವುತ್ ಟ್ವೀಟ್ ಮೂಲಕ ವಿಷಯವನ್ನು ಖಚಿತಪಡಿಸಿದ್ದಾರೆ.

ಭಾರತ ಕಂಡ ಜನಪ್ರಿಯ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು.
ಇತ್ತೀಚೆಗೆ ಕೊರೊನಾ (Corona) ಸೋಂಕಿಗೆ ತುತ್ತಾಗಿದ್ದ ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಕೊರೊನಾ ಹಾಗೂ ನ್ಯುಮೋನಿಯಾದಿಂದ ಚೇತರಿಸಿಕೊಂಡಿದ್ದ ಅವರು, ವೆಂಟಿಲೇಟರ್​ನಿಂದ ಹೊರಬಂದಿದ್ದರು. ಆದರೆ ನಿನ್ನೆ (ಶನಿವಾರ) ಮತ್ತೆ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಅವರು ಬಹು ಅಂಗಾಂಗ ವೈಫಲ್ಯದಿಂದ ಇಹಲೋಕ ತ್ಯಜಿಸಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಎಎನ್​ಐಗೆ ಮಾಹಿತಿ ನೀಡಿದ್ದಾರೆ. ಲತಾ ಅವರ ನಿಧನದಿಂದ ದೇಶದ ಗಾಯನ ಪರಂಪರೆಯ ಹಿರಿಯ ಕೊಂಡಿ ಕಳಚಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು