7:06 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ…

ಇತ್ತೀಚಿನ ಸುದ್ದಿ

ಫೆ.13: ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ 

09/02/2022, 11:33

ವಿಜಯನಗರ(reporterkarnataka.com) : ರಾಷ್ಟ್ರೀಯ ವಿಜ್ಞಾನ ದಿನ ಮತ್ತು ಡಾ. ಸಿ.ವಿ.ರಾಮನ್ ಜನ್ಮದಿನದ ಪ್ರಯುಕ್ತ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯು(KJVS)  ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಆಂಗ್ಲ ಮತ್ತು ಕನ್ನಡ ಮಾಧ್ಯಮದಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ನಡೆಸಲಿದೆ. ಆಸಕ್ತ ಪ್ರೌಢಶಾಲೆ  ವಿದ್ಯಾರ್ಥಿಗಳು ದಿನಾಂಕ  10-02-2022 ರೊಳಗೆ ಆನ್‌ಲೈನ್‌ ಅಥವಾ ಖುದ್ದಾಗಿ ನೋಂದಣಿ ಮಾಡಿಕೊಳ್ಳಬಹುದು.ಜಿಲ್ಲಾ ಮಟ್ಟದಲ್ಲಿ ಫೆಬ್ರವರಿ 13 ರ ಬೆ 11 ರಿಂದ 11 30 ಕ್ಕೆ ಆನ್‌ಲೈನ್‌ ಮೂಲಕ ರಸಪ್ರಶ್ನೆ ಸ್ಪರ್ಧೆ ನಡೆಯಲಿದೆ ಈ ಜಿಲ್ಲಾ  ಹಂತದಲ್ಲಿ ಆಯ್ಕೆಯಾದ ಮೂವರು ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಜೊತೆಗೆ ಮೂವರು ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಹಾಗೂ ಈ ಸ್ಪರ್ಧೆಗೆ ಭಾಗವಹಿಸಿದ ಪ್ರತಿ ವಿದ್ಯಾರ್ಥಿಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತದೆ . ಈ ಜಿಲ್ಲಾ ಹಂತದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ದಿನಾಂಕ 20-02-2022 ರಂದು ರಾಜ್ಯ ಹಂತದಲ್ಲಿ ನಡೆಯುವ ಕ್ವಿಜ್ ಸ್ಪರ್ಧೆಗೆ ಅರ್ಹತೆ ಪಡೆದುಕೊಳ್ಳುತ್ತಾರೆ . ರಾಜ್ಯ ಹಂತದಲ್ಲಿನ ಪ್ರಥಮ ಸ್ಥಾನಕ್ಕೆ 6000 ರೂ ದ್ವಿತೀಯ ಸ್ಥಾನಕ್ಕೆ 5000 ರೂ ಹಾಗೂ ತೃತೀಯ ಸ್ಥಾನಕ್ಕೆ 4000 ರೂ ಗಳ ಕ್ಯಾಶ್ ಪ್ರೈಸ್ ಜೊತೆ ವಿಶೇಷ ಸ್ಮರಣಿಕೆ , ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು . ಈ ಸ್ಪರ್ಧೆಯಲ್ಲಿ ಭಾಗವಹಿಸಲು ನಿಮ್ಮ ತಾಲ್ಲೂಕು ಅಥವಾ ಜಿಲ್ಲಾ KJVS ಪಧಾದಿಕಾರಿಗಳನ್ನು ಸಂಪರ್ಕ ಮಾಡಿ.ಹೆಚ್ಚಿನ ಮಾಹಿತಿಗಾಗಿ ವಿಜಯನಗರ ಜಿಲ್ಲಾ ಈ ಕ್ವಿಜ್ ನ ಸಂಯೋಜಕರಾದ ಬಸವರಾಜ ಗೌಡ್ರ  (9535958192 ) ಮತ್ತು ತಾ.ಸಂ.ರಾದ  ಶ್ರೀ ನವೀನಕುಮಾರ (9449137008) ಇವರನ್ನು ಸಂಪರ್ಕ ಮಾಡಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು