12:37 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಗೆ 20 ಅಂಶಗಳ ಸೂತ್ರ: ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸಭೆ ನಡೆಸಲು ಸೂಚನೆ

12/02/2022, 08:25

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಾಯಿತು.

ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಉಪಸ್ಥಿತರಿದ್ದರು.

ವೀಡಿಯೋ ಸಂವಾದದ ಮುಖ್ಯಾಂಶಗಳು:

* ಸೋಮವಾರದಿಂದ ಪ್ರೌಢಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು.

* ಸೂಕ್ಷ್ಮ ಜಿಲ್ಲೆಗಳಲ್ಲಿ ಪ್ರಮುಖ ಶಾಲೆಗಳನ್ನು ಎಸ್.ಪಿ ಹಾಗೂ ಡಿ.ಸಿಗಳು ಭೇಟಿ ಮಾಡಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಅಹಿತಕರ ಘಟನೆಗಳು ಆಗದಂತೆ ಎಚ್ಚರ ವಹಿಸಬೇಕು.

* ಶಾಲಾ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು ಹಾಗೂ ಆಡಳಿತ ಮಂಡಳಿಯೊಂದಿಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ಹಾಗೂ ಡಿಡಿಪಿಐ ಅವರು ನಿರಂತರ ಸಂಪರ್ಕ ಹೊಂದಿರಬೇಕು.

* ಜಿಲ್ಲೆಯ ಹಿರಿಯರು, ಪ್ರಮುಖರು, ಜನಪ್ರತಿನಿಧಿಗಳೊಂದಿಗೂ ನಿರಂತರ ಸಂಪರ್ಕ ಹೊಂದುವುದು.

* ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಶಾಂತಿ ಸಭೆಯನ್ನು ನಡೆಸಿ ಉಚ್ಚ ನ್ಯಾಯಾಲಯದ ಆದೇಶವನ್ನು ಅಕ್ಷರಶಃ ಪಾಲಿಸಬೇಕು.

* ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಬೇಕು.

* ಯಾವುದೇ ಒತ್ತಡಕ್ಕೆ ಮಣಿಯಬಾರದು. ಸಣ್ಣ ಘಟನೆಯನ್ನೂ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು.

* ಆದ್ಯತೆ ಮೇರೆಗೆ ಕಾನೂನು ಸುವ್ಯವಸ್ಥೆ ಕಾಪಾಡುವುದು.

* ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸಭೆಗಳನ್ನು ನಡೆಸಬೇಕು.

* ಹೊರಗಿನ ಪ್ರಚೋದನೆಗೆ ಒಳಗಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರದೇಶಗಳನ್ನು ಹಂಚಿಕೆ ಮಾಡಿಕೊಂಡು ನಿಗಾ ವಹಿಸಬೇಕು.

* ಎಲ್ಲಾ ರಾಜಕೀಯ ಪಕ್ಷಗಳನ್ನು, ಧಾರ್ಮಿಕ ಮುಖಂಡರನ್ನು ಸ್ಥಳೀಯ ಅಧಿಕಾರಿಗಳು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.

* ಸಾಮಾಜಿಕ ಮಾಧ್ಯಮಗಳ ಮೂಲಕ ವದಂತಿ ಹಾಗೂ ಪ್ರಚೋದನಕಾರಿ ಸಂದೇಶಗಳು ಹರಡದಂತೆ ನಿಗಾ ವಹಿಸಬೇಕು.

* ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.

* ಪ್ರಾಂಶುಪಾಲರು ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಬೇಕು.

* ಪ್ರತಿಯೊಬ್ಬರೂ ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಒಂದು ಅಹಿತಕರ ಘಟನೆ ಜರಗದಂತೆ ಕಟ್ಟೆಚ್ಚರ ವಹಿಸಬೇಕು.

* ಸಮಾಜಘಾತುಕ ಶಕ್ತಿಗಳನ್ನು ಗುರುತಿಸಿ ಅವರ ಮೇಲೆ ನಿಗಾ ವಹಿಸಲಾಗಿದೆ ಎಂಬ ಸಂದೇಶ ರವಾನಿಸಬೇಕು.

* ಮೇಲಿನಿಂದ ಯಾವುದೇ ಆದೇಶಗಳಿಗೆ ಕಾಯದೇ, ಸಂದರ್ಭಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಬೇಕು.

* ಮಾಧ್ಯಮಗಳಿಗೆ ಜಿಲ್ಲೆಗಳಲ್ಲಿನ ವಸ್ತುಸ್ಥಿತಿಯನ್ನು ಸರಿಯಾಗಿ ವಿವರಿಸಬೇಕು. ತಪ್ಪು ಮಾಹಿತಿ ಹೋಗದಂತೆ ಎಚ್ಚರ ವಹಿಸಬೇಕು

ಇತ್ತೀಚಿನ ಸುದ್ದಿ

ಜಾಹೀರಾತು