10:01 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಕಾಂಗ್ರೆಸ್ ಪಕ್ಷದ  ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ 

13/02/2022, 18:25

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಮುಂದಿನ ವಿಧಾಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಬೇಕೆಂದು ಆಡಳಿತ ಪಕ್ಷದವರು ಅಭಿವೃದ್ಧಿ ಕಾಮಗಾರಿಗೆ ಅನುದಾನ ತಡೆದಿದ್ದು, ಕಾನೂನಾತ್ಮಕ ಹೋರಾಟದಿಂದ ಕ್ಷೇತ್ರಕ್ಕೆ ಅನುದಾನ ತಂದು ಅಭಿವೃದ್ಧಿ ಮಾಡಿರುವ ತೃಪ್ತಿ ನನಗಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.


ನಗರದ ಶಾಸಕರ ನಿವಾಸದ ಬಳಿ ಪರಶುರಾಂಪುರ ಹಾಗೂ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ಇತ್ತೀಚಿನ ದಿನಗಳಲ್ಲಿ ಪೇಪರ್ ನೋಡುವುದಾಗಲಿ ಬರೆಯುವ ಅಭ್ಯಾಸ ಕಣ್ಮರೆಯಾಗುತ್ತಿರುವ ಕಾರಣ ಕಾಂಗ್ರೆಸ್ ಪಕ್ಷ ಇದೇ ಪ್ರಥಮ ಬಾರಿಗೆ ಡಿಜಿಟಲ್ ತಂತ್ರಜ್ಞಾನದೊಂದಿಗೆ ಪಕ್ಷದ ಸದಸ್ಯತ್ವ ನೋಂದಣೆ ಮಾಡಲಾಗುತ್ತಿದೆ. ಪಕ್ಷದ ಯಾವುದೇ ಚಿನ್ನೆಯಲ್ಲಿ ಚುನಾಣೆಗೆ ಸ್ಪರ್ಧಿಸಬೇಕಾದರೆ ಸದಸ್ಯತ್ವ ಕಡ್ಡಾಯವಾಗಿರುತ್ತದೆ. ಆದ್ದರಿಂದ ೧೮ ವರ್ಷ ತುಂಬಿದ ಮತದಾರರ ಗುರುತಿನ ಚೀಟಿ ಹೊಂದಿದ ಪ್ರತಿಯೊಬ್ಬರು ಸದಸ್ಯತ್ವ ಪಡೆಯ ಬೇಕು. ನಗರ ಹಾಗೂ ಗ್ರಾಮೀಣ ಭಾಗದ ಬೂತ್ ಮಟ್ಟದಲ್ಲಿ ಹೆಚ್ಚು ಹೆಚ್ಚು ಸದಸ್ಯತ್ವ ನೋಂದಣೆ ಮಾಡುವ ಮೂಲಕ ತಳ ಮಟ್ಟದಿಂದಲ್ಲೆ ಪಕ್ಷ ಸಂಘಟನೆಗೆ ಮುಂದಾಗ ಬೇಕು.

ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ಕ್ಷೇತ್ರಕ್ಕೆ ಹಾಗೂ ರಾಜ್ಯಕ್ಕೆ ಸಾಕಷ್ಟು ಹಿಂದುಳಿದ ವರ್ಗಗಳಿಗೆ ಯೋಜನೆಗಳನ್ನು ಜಾರಿ ಮಾಡಿ ಹೆಚ್ಚು ಅನುದಾನ ಬಿಡುಗಡೆ ಮಾಡಿರುತ್ತಾರೆ. ಕ್ಷೇತ್ರದ ಎಷ್ಟೇ ಅಭಿವೃದ್ಧಿಯಾದರೂ ಕಾರ್ಯಕರ್ತರಿಗೆ ಏನು ಮಾಡಿಲ್ಲ ಎಂಬ ಅಸಮಧಾನವಿದೆ. ಕೆಲವರು ಪಕ್ಷದಲ್ಲಿದ್ದುಕೊಂಡೆ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾರ್ಚ್ ೩೧ ರ ಒಳಗೆ ಸುಮಾರು ೫೦ ಲಕ್ಷಕ್ಕೂ ಹೆಚ್ಚು ಡಿಜಿಟಲ್ ಸದಸ್ಯತ್ವ ನೋಂದಣೆ ಮಾಡಬೇಕೆಂಬ ಗುರಿಯಿದೆ.

ಜನರನ್ನು ದಿಕ್ಕು ತಪ್ಪಿಸುವುದು, ಜನರಿಗೆ ಸುಳ್ಳು ಭರವಸೆ ನೀಡುವುದೇ ಬಿಜೆಪಿ  ಸರ್ಕಾರ ಬಿಜೆಪಿ ಸರಕಾರದ ವೈಫಲ್ಯ ಹಾಗೂ ಕಾಂಗ್ರೇಸ್ ಸರ್ಕಾರ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಜನಪರ ಯೋಜನೆಗಳ ಜಾರಿಗೆ ತಂದು ಸಾರ್ವಜನಿಕರಿಗೆ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಿದೆ. ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ಮನೆಮನೆಗೆ ಹೋಗಿ ಜನರಲ್ಲಿ ಅರಿವು ಮೂಡಿಸುವ ಮೂಲಕ ಸದಸ್ಯತ್ವ ನೋಂದಣೆ ಜತೆಗೆ ಪಕ್ಷ ಸಂಘಟನೆಗೆ ಮುಂದಾಗುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷೆ ಆರ್. ಮಂಜುಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿ.ತಿಪ್ಪೇಸ್ವಾಮಿ, ಕಿರಣ್ ಶಂಕರ್, ನಗರಸಭೆ ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ಸುಮಕ್ಕ ಬರಮಣ್ಣ,  ಮಾಜಿ ಜಿಪಂ ಅಧ್ಯಕ್ಷ ರವಿಕುಮಾರ್, ಕಿರಣ್, ಮುಂಡರಾದ ಕವಿತದಳವಾಯಿಮೂರ್ತಿ,ಡಿ.ಕೆ.ಕಾಟಯ್ಯ, ಸಿ.ಟಿ.ಶ್ರೀನಿವಾಸ ಇತರರಿದ್ದರು.

ಫೊಟೊ ಚಳ್ಳಕೆರ ನಗರದ ಶಾಸಕ ಟಿ.ರಘುಮೂರ್ತಿ ನಿವಾಸದ ಬಳಿ ಪರಶುರಾಂಪುರ ಹಾಗೂ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ  ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು