10:19 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಸರಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ: ಕೆ. ಆರ್. ಪೇಟೆಯಲ್ಲಿ ರೈತ ಸಂಘದಿಂದ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಆರಂಭ

23/02/2022, 16:53

ರಾಜೇಶ್ವರಿ ಗೌಡ ನಾಗಮಂಗಲ ಮಂಡ್ಯ

info.reporterkarnataka@gmail.com

ಕೃಷ್ಣರಾಜಪೇಟೆ ತಾಲೂಕು ಆಡಳಿತದ ಜನವಿರೋಧಿ ನೀತಿ, ಸರ್ಕಾರಿ ಕಚೇರಿಗಳಲ್ಲಿ ಮುಗಿಲು ಮುಟ್ಟಿರುವ ಭ್ರಷ್ಟಾಚಾರವನ್ನು ವಿರೋಧಿಸಿ ರಾಜ್ಯ ರೈತ ಸಂಘದಿಂದ ತಮಟೆ ಚಳವಳಿ ಮೂಲಕ ಮಿನಿ ವಿಧಾನಸೌಧ ಎದುರು ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಆರಂಭಿಸಲಾಯಿತು.


ಭ್ರಷ್ಟಾಚಾರ ತಾಂಡವವಾಡುತ್ತಿದ್ದರೂ ಸ್ಥಳೀಯ ಶಾಸಕ,ಸಚಿವ ಡಾ.ನಾರಾಯಣಗೌಡ ಅವರ ಭೇಜವಾಬ್ಧಾರಿತನವನ್ನು ಖಂಡಿಸಿ ಇಂದು ರೈತಸಂಘದ ನೇತೃತ್ವದಲ್ಲಿ ನೂರಾರು ರೈತರು ತಮಟೆ ಚಳವಳಿ ನಡೆಸಿ ಮಿನಿ ವಿಧಾನಸೌಧದ ಆವರಣದಲ್ಲಿ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹವನ್ನು ಆರಂಭಿಸಿದರು.

ಸರ್ಕಾರಿ ಕಛೇರಿಗಳಲ್ಲಿ ಅಧಿಕಾರಿಗಳಿಗೆ ಲಂಚದ ಹಣ ನೀಡದಿದ್ದರೆ ಶ್ರೀ ಸಾಮಾನ್ಯರ ಕೆಲಸ ಕಾರ್ಯಗಳು ಆಗುವುದಿಲ್ಲ. ಬಡಪಾಯಿ ರೈತರು ಕಚೇರಿಗೆ ಅಲೆದೂ ಅಲೆದು ಚಪ್ಪಲಿಗಳು ಸವೆಯುತ್ತಿವೆ. ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವ ಅಧಿಕಾರಿಗಳನ್ನು ಬ್ಯಾಟರಿ ಹಾಕಿ ಹುಡುಕಿದರೂ ಕಾಣುತ್ತಿಲ್ಲ. ಕೆ.ಆರ್.ಪೇಟೆ ವಿಧಾನಸಭೆ ಕ್ಷೇತ್ರದ ಶಾಸಕರು, ರಾಜ್ಯದ ಸಚಿವರಾಗಿರುವ ನಾರಾಯಣಗೌಡ ಅವರು ಕ್ಷೇತ್ರದ ಜನರು ಹಾಗೂ ರೈತಾಪಿ ವರ್ಗದ ಹಿತವನ್ನು ಕಡೆಗಣಿಸಿ ರಾಜ್ಯವನ್ನು ಸುತ್ತುತ್ತಿದ್ದಾರೆ.

ಬಡ ಬೋರೇ ಗೌಡನ ಕಷ್ಟಸುಖವನ್ನು ಕೇಳುವವರು ಹಾಗೂ ಹೇಳುವವರು ಯಾರೂ ಇಲ್ಲದಂತಾಗಿದೆ. ಗಾಢವಾದ ನಿದ್ರೆಯಲ್ಲಿ ಮುಳುಗಿರುವ ತಾಲೂಕು ಆಡಳಿತವನ್ನು ಎಚ್ಚರಿಸಿ ಸರಿ ದಾರಿಗೆ ತರಲು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದೇವೆ ಎಂದು.ರೈತ ನಾಯಕ ಮುದುಗೆರೆ ರಾಜೇಗೌಡ ಅವರು ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಹಿರಿಯ ಅಧಿಕಾರಿಗಳು ಸೇರಿದಂತೆ ಜಿಲ್ಲಾಧಿಕಾರಿ, ಜಿಪಂ ಸಿಇಓ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸ್ಥಳಕ್ಕೆ ಬರುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಅವರುವ ಎಚ್ಚರಿಸಿದರು.


ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಿಂದ ಆರಂಭವಾದ ರೈತರ ಪ್ರತಿಭಟನಾ ಮೆರವಣಿಗೆಯು ತಾಲೂಕು ಕಚೇರಿಯವರೆಗೆ ನಡೆಯಿತು. ತಾಲೂಕು ರೈತಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಬೂಕನಕೆರೆ ನಾಗರಾಜು, ರೈತ ಮುಖಂಡರಾದ ಲಕ್ಷ್ಮೀಪುರ ಜಗಧೀಶ್, ಮಂದಗೆರೆ ಜಯರಾಂ, ಪಿಬಿ ಮಂಚನಹಳ್ಳಿ ನಾಗಣ್ಣಗೌಡ, ನಗರೂರು ಕುಮಾರ್, ಮುದ್ದುಕುಮಾರ್, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ನಂದಿನಿ ಜಯರಾಂ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ತಾಲೂಕಿನ ಐಚನಹಳ್ಳಿ ಗ್ರಾಮದ ಕೃಷ್ಣೇಗೌಡ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಪ್ರತಿಭಟನಾಕಾರರು, ಕೊಲೆ ಆರೋಪಿಗಳನ್ನು ಬಂಧಿಸಿ ಮೃತರ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು