10:34 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಕಿನ್ನಿಗೋಳಿ: ತೋಟಕ್ಕೆ ಕಾಡುಕೋಣ ದಾಳಿ; ಬೆಳೆ ಹಾನಿ, ಸ್ಥಳೀಯರಲ್ಲಿ ಆತಂಕ

15/03/2022, 00:55

ಕಿನ್ನಿಗೋಳಿ(reporterkarnataka.com): ಕಿನ್ನಿಗೋಳಿ ಸಮೀಪದ ಉಳೆಪಾಡಿ ಎಂಬುವಲ್ಲಿ ಸೋಮವಾರ ಬೆಳಿಗ್ಗೆ ಕಾಡುಕೋಣ ಮತ್ತೆ ಪ್ರತ್ಯಕ್ಷವಾಗಿದೆ.

ಕಾಡುಕೋಣವು ಗದ್ದೆ ಮನೆಯ ಮುಂಭಾಗದಲ್ಲಿ ತೋಟಕ್ಕೆ ನುಗ್ಗಿವೆ. ಹಲವಾರು ತೋಟಗಳಿಗೆ ಪ್ರವೇಶಿಸಿ ಬಾಳೆ, ಅಡಿಕೆ ತೆಂಗಿನ ಗಿಡಗಳು  ಹಾನಿ ಮಾಡಿವೆ. ಕಾಡುಕೋಣವನ್ನು ನೋಡಿದ ಸ್ಥಳೀಯರು  ಅದರ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.


ಕೆಲವೇ ದಿನಗಳ ಹಿಂದೆ ಕುಕ್ಕಟ್ಟೆ ಸಮೀಪದ ರಸ್ತೆ ಬದಿಯಲ್ಲಿ ಕಾಡುಕೋಣವೊಂದು ಪ್ರತ್ಯಕ್ಷವಾಗಿದ್ದು ಈಗ ಮತ್ತೆ ಪ್ರತ್ಯಕ್ಷಗೊಂಡು ಜನರಲ್ಲಿ ಆತಂಕ ಹಾಗೂ ಭಯದ ವಾತಾವರಣ ಸೃಷ್ಟಿಸಿದೆ.

ಇನ್ನೂ ಕೂಡ ಅರಣ್ಯ ಅಧಿಕಾರಿಗಳು  ಕ್ರಮ ಕೈಗೊಳ್ಳದ ಕಾರಣ ಈಗಾದರೂ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಹಾಗೂ ಸೂಕ್ತ ಕ್ರಮ  ಕೈಗೊಳ್ಳಬೇಕು ಎಂದು  ಸ್ಥಳೀಯರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು