4:25 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ್ದ ಬಾಂಬ್ ಪ್ರಕರಣ: ಆರೋಪಿ ಆದಿತ್ಯ ರಾವ್ ಗೆ 20 ವರ್ಷ ಜೈಲು

16/03/2022, 22:37

ಮಂಗಳೂರು(reporterkarnataka.com): ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ ಬಾಂಬ್ ಪ್ರಕರಣ ತೀರ್ಪು ಹೊರಬಿದ್ದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಆರೋಪಿ ಆದಿತ್ಯ ರಾವ್ ಗೆ ದ.ಕ. ಜಿಲ್ಲಾ 4ನೇ ಹೆಚ್ಚುವರಿ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.

ಆದಿತ್ಯ ರಾವ್ 2020, ಜನವರಿ 20ರಂದು ಆಟೋರಿಕ್ಷಾವೊಂದರಲ್ಲಿ ಬಂದು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಸ್ಫೋಟಕ ತುಂಬಿದ್ದ ಬ್ಯಾಗೊಂದನ್ನು ಇಟ್ಟು ಅದೇ ರಿಕ್ಷಾದಲ್ಲಿ ಪರಾರಿಯಾಗಿದ್ದ. ಭದ್ರತಾ ಸಿಬ್ಬಂದಿಗಳು ಅನಾಥವಾಗಿರುವ ಬ್ಯಾಗನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅನಾಥ ಬ್ಯಾಗ್ ನ ವಿಷಯ ಹೊರಬರುತ್ತಿದ್ದಂತೆ ಕೆಲವು ಖಾಸಗಿ ವಾಹಿನಿಗಳು ಇಡೀ ದಿನ ಈ ಕುರಿತು ಊಹಾಪೋಹ ವರದಿ ಮಾಡಿದ್ದವು. ನಂತರ ಸಿಸಿ ಕ್ಯಾಮೆರಾ ಫೂಟೇಜ್ ನೋಡಿದ ಬಳಿಕ ಆರೋಪಿಯ ಸುಳಿವು ಪಡೆಯುವಲ್ಲಿ ಪೊಲೀಸರು ಯಶಸ್ವಿಯಾದರು. ಈ ನಡುವೆ ಆರೋಪಿ ಆದಿತ್ಯ ರಾವ್ ಬೆಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕರ ಮುಂದೆ ಶರಣಾಗಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು