6:40 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ನರಿಮೊಗ್ರು; ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ ಹಾಗೂ ಸ್ವಚ್ಛವಾಹಿನಿ ಘನತ್ಯಾಜ್ಯ ವಾಹನ ಲೋಕಾರ್ಪಣೆ

09/04/2022, 13:28

ಪುತ್ತೂರು(reporterkarnataka.com):
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ನರಿಮೊಗ್ರು ಇದರ ವತಿಯಿಂದ ನರಿಮೊಗ್ರು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ ಹಾಗೂ ಸ್ವಚ್ಛವಾಹಿನಿ ಘನತ್ಯಾಜ್ಯ ವಾಹನದ ಲೋಕಾರ್ಪಣಾ ಕಾರ್ಯಕ್ರಮ ಶುಕ್ರವಾರ ನಡೆಯಿತು.


ಡಿಜಿಟಲ್ ಗ್ರಂಥಾಲಯ ಉದ್ಘಾಟನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಉದ್ಘಾಟಿಸಿದರು. ಬಳಿಕ ಸ್ವಚ್ಛ ವಾಹಿನಿ ಘನತ್ಯಾಜ್ಯ ಸಾಗಾಟ ವಾಹನವನ್ನು ಶಾಸಕರು ಚಲಾಯಿಸುವ ಮೂಲಕ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಮಹಾತ್ಮ ಗಾಂಧಿ ನರೇಗಾ ಯೋಜನೆಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಒಂಬಡ್ಸ್ಮನ್ ಹಾಗೂ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ರಾಮದಾಸ್ ಗೌಡ ಜೊತೆಗಿದ್ದರು.


ಈ ಸಂದರ್ಭ ನರಿನೊಗ್ರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿದ್ಯಾ, ಉಪಾಧ್ಯಕ್ಷರಾದ ಸುಧಾಕರ ಕುಲಾಲ್, ಸದಸ್ಯರು, ಪಂಚಾಯತಿ ಅಧಿಕಾರಿಯಾದ ರವಿಚಂದ್ರ ಯು, ಕಾರ್ಯದರ್ಶಿಯಾದ ಶೇಖ್ ಕಲಂದರ್ ಅಲಿ, ಬಿಂದು ಫ್ಯಾಕ್ಟರಿಯ ಅಧಿಕಾರಿಯಾದ  ನಾಗರಾಜ್, ಗ್ರಂಥಪಾಲಕ ವರುಣ್ ಕುಮಾರ್, ಗ್ರಾಪಂ‌ ಸದಸ್ಯ ನವೀನ್ ಕಾರ್ಯಕ್ರಮ ನಿರ್ವಹಿಸಿದರು‌.

ಇತ್ತೀಚಿನ ಸುದ್ದಿ

ಜಾಹೀರಾತು