7:37 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ವೈದ್ಯರು, ಆಕ್ಸಿಜನ್ ಕೊರತೆಯಾಗದಂತೆ ಕ್ರಮವಹಿಸಿ:  ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸೂಚನೆ 

28/04/2022, 10:47

ಬೆಂಗಳೂರು( reporterkarnataka.com): ಕೋವಿಡ್ 4ನೇ ಅಲೆ ತಡೆಗಾಗಿ 3T(ಟೆಸ್ಟಿಂಗ್ ಟ್ರೇಸಿಂಗ್ ,ಟ್ರೀಟ್ ಮೆಂಟ್) ಸೂತ್ರ ಅನುಸರಿಸಿ. ವೈದ್ಯರು , ಆಕ್ಸಿಜನ್ ಕೊರತೆಯಾಗದಂತೆ ಕ್ರಮವಹಿಸಿ ಎಂದು ಎಲ್ಲ ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಮೋದಿ ಸೂಚನೆ ನೀಡಿದರು.

ಕೋವಿಡ್ 4ನೇ ಅಲೆ ಭೀತಿ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸುತ್ತಿದ್ದು  ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಚಿವ ವಿ.ಸೋಮಣ್ಣ ಸೇರಿ ಅಧಿಕಾರಿಗಳು ಭಾಗಿಯಾಗಿದ್ದಾರೆ. ಕೋವಿಡ್ 4ನೇ ಅಲೆ ಹರಡದಂತೆ ತಡೆಗಟ್ಟುವ ಬಗ್ಗೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತಿದೆ.

ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ,  2ನೇ ಡೋಸ್ ಪಡೆಯದವರನ್ನ ಪತ್ತೆ ಹಚ್ಚಿ. 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ತೀವ್ರಗೊಳಿಸಿ.  ಆಕ್ಸಿಜನ್ ,ವೈದ್ಯರ ಕೊರತೆ ಆಗದಂತೆ ನೋಡಿಕೊಳ್ಳಿ.. ಹೈರಿಸ್ಕ್  ದೇಶಗಳಿಂದ ಬರುವವರ ಮೇಲೆ ನಿಗಾ ಇರಲಿ. ಮಕ್ಕಳಿಗೆ ಲಸಿಕೆ ಅಭಿಯಾನ ಚುರುಕುಗೊಳಿಸಿ ಎಂದು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು