8:08 PM Thursday25 - April 2024
ಬ್ರೇಕಿಂಗ್ ನ್ಯೂಸ್
ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ…

ಇತ್ತೀಚಿನ ಸುದ್ದಿ

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ರಾಜ್ಯ ಸಂಪುಟ ಸಭೆ ಒಪ್ಪಿಗೆ 

12/05/2022, 23:36

ಬೆಂಗಳೂರು(reporterkarnataka.com):ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ವಿಧಾನಸಭೆಯಲ್ಲಿ ಅಂಗೀಕಾರಗೊಂಡು, ಪರಿಷತ್ ನಲ್ಲಿ ಅಂಗೀಕಾರಗೊಳ್ಳದೇ ಬಾಕಿ ಉಳಿದ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಈ ಮೂಲಕ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಶೀಘ್ರವೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳ್ಳಲಿದೆ.

ಈ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ , ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ರಾಜ್ಯದಲ್ಲಿ ಜಾರಿಗೆ ತರೋದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದು ಮಧ್ಯಾಹ್ನ 12ಕ್ಕೆ ವಿಧಾನಸೌಧದಲ್ಲಿ ನಡೆದಂತ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ, ಕಾಯ್ದೆ ಕುರಿತಂತೆ ಚರ್ಚಿಸಲಾಯಿತು. ಅಲ್ಲದೇ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ತರುವ ಕಡತಕ್ಕೂ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಹೀಗಾಗಿ ರಾಜ್ಯದಲ್ಲಿ ಸುಗ್ರೀವಾಜ್ಞೆಯ ಮೂಲಕ ಶೀಘ್ರವೇ ಮತಾಂತರ ನಿಷೇಧ ಕಾಯ್ದೆ ಜಾರಿಗೊಳ್ಳಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು