12:58 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಕರ್ನಾಟಕದಿಂದ ರಾಜ್ಯಸಭೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧೆ?: ರಾಜ್ಯದಿಂದ ಈ ಹಿಂದೆ ಇಂದಿರಾ, ಸೋನಿಯಾ ಕೂಡ ಸ್ಪರ್ಧಿಸಿದ್ದರು!

15/05/2022, 21:13

ಬೆಂಗಳೂರು(reporterkarnataka.com): ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಕಾಂಗ್ರೆಸ್ ಪ್ರಿಯಾಂಕಾ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಕಳುಹಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ.

ರಾಜ್ಯದಿಂದ 4 ಮಂದಿಯನ್ನು ರಾಜ್ಯಸಭೆಗೆ ಕಳುಹಿಸುವ ಅವಕಾಶವಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,  ಕೆ.ಸಿ. ರಾಮಮೂರ್ತಿ, ಜಯರಾಂ ರಮೇಶ್ ಹಾಗೂ ಆಸ್ಕರ್ ಫರ್ನಾಂಡಿಸ್ ಅವರ ರಾಜ್ಯಸಭೆ ಸದಸ್ಯತ್ವದ ಅವಧಿ ಇದೇ ಜೂನ್ 30ಕ ಕೊನೆಗೊಳ್ಳಲಿದೆ. ಇವರಲ್ಲಿ ನಿರ್ಮಲಾ ಸೀತಾರಾಮನ್, ಕೆ.ಸಿ. ರಾಮಮೂರ್ತಿ ಹಾಗೂಜಯರಾಂ ರಮೇಶ್ ಅವರು ಬಿಜೆಪಿಯಿಂದ ಆಯ್ಕೆಗೊಂಡಿದ್ದರು. ಆದರೆ ಇತ್ತೀಚೆಗೆ ನಿಧನರಾದ ಆಸ್ಕರ್ ಫರ್ನಾಂಡಿಸ್ ಅವರು ಕಾಂಗ್ರೆಸ್ ನಿಂದ ರಾಜ್ಯಸಭೆಗೆ ಆಯ್ಕೆಗೊಂಡಿದ್ದರು. ಇದೀಗ ಆಸ್ಕರ್ ಫರ್ನಾಂಡಿಸ್ ಅವರಿಂದ ತೆರವಾದ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ಇತ್ತ ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬಿಜೆಪಿ ಮತ್ತೆ ಕರ್ನಾಟಕದಿಂದ ರಾಜ್ಯಸಭೆಗೆ ಕಳುಹಿಸಲಿದೆ.

ಕಾಂಗ್ರೆಸ್ ನ ಇತಿಹಾಸ ನೋಡಿದರೆ ಗಾಂಧಿ ಕುಟುಂಬ ಮತ್ತು ಕರ್ನಾಟಕಕ್ಕೆ ಬಹಳ ಹಿಂದಿನಿಂದಲೇ ರಾಜಕೀಯ ನೆಂಟಸ್ತಿಕೆ ಇದೆ. 70ರ ದಶಕದಿಂದಲೇ ಗಾಂಧಿ ಕುಟುಂಬದ ಸದಸ್ಯರು ಕರ್ನಾಟಕದಿಂದ ಸ್ಪರ್ಧಿಸಿದ ನಿದರ್ಶನಗಳಿವೆ. ಇಂದಿರಾಗಾಂಧಿ ಅವರು  1977ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಂಸತ್ ಪ್ರವೇಶಿಸಿದ್ದರು. 1977ರ ಸಂಸತ್ ಚುನಾವಣೆಯಲ್ಲಿ ಇಂದಿರಾ ಗಾಂಧಿ ಅವರು ರಾಯಬರೇಲಿ ಕ್ಷೇತ್ರದಿಂದ ಸೋಲು ಅನುಭವಿಸಿದ್ದರು. ಜತೆಗೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರ ಕಳೆದುಕೊಂಡಿತ್ತು. 77ರ ಚುನಾವಣೆಯಲ್ಲಿ ಇಡೀ ದೇಶದಲ್ಲೇ ಮತದಾರರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದರೂ ಕರ್ನಾಟಕದ ಜನತೆ ಕಾಂಗ್ರೆಸ್ ನ ಕೈಬಿಡಲಿಲ್ಲ. ಕಾಂಗ್ರೆಸ್ ಗೆದ್ದಿದ್ದ ಚಿಕ್ಕಮಗಳೂರು ಕ್ಷೇತ್ರದ ಸಂಸದರ ರಾಜೀನಾಮೆ ಕೊಡಿಸಿ ಉಪ ಚುನಾವಣೆಯಲ್ಲಿ ಇಂದಿರಾ ಗಾಂಧಿ ಸ್ಪರ್ಧಿಸಿ ಗೆಲುವು ಕಂಡಿದ್ದರು. ನಂತರ ಬಳ್ಳಾರಿಯಿಂದ ಇಂದಿರಾ ಗಾಂಧಿ ಸೊಸೆ ಸೋನಿಯಾ ಗಾಂಧಿ ಸ್ಪರ್ಧಿಸಿ ಲೋಕಸಭೆ ಪ್ರವೇಶಿಸಿದ್ದರು. ಇದೀಗ ಇಂದಿರಾ ಗಾಂಧಿ ಅವರ ಮೊಮ್ಮಗಳು ಪ್ರಿಯಾಂಕಾ ಗಾಂಧಿ ಅವರನ್ನು ಕರ್ನಾಟಕದ ಮೂಲಕ ರಾಜ್ಯಸಭೆಗೆ ಕಳುಹಿಸಲು ಎಲ್ಲ ಸಿದ್ಧತೆಗಳು ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು