2:46 AM Friday19 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಪ್ರಚಾರ:  #MarvellousMangalore ಹ್ಯಾಷ್ ಟ್ಯಾಗ್ ಅಭಿಯಾನ

16/05/2022, 18:15

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಹೆಚ್ಚಿನ ಪ್ರಚಾರ ನೀಡುವ ನಿಟ್ಟಿನಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಸಾಮಾಜಿಕ ಜಾಲತಾಣ ಬಳಕೆದಾರರೊಂದಿಗೆ ಕೊಡಿಯಾಲಬೈಲ್ ನಲ್ಲಿರುವ ಅಟಲ್ ಸೇವಾ ಕೇಂದ್ರದಲ್ಲಿ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ನಗರದ ಪ್ರವಾಸಿ ಕೇಂದ್ರಗಳು, ಖಾದ್ಯಗಳು, ದೇವಸ್ಥಾನಗಳು ಸೇರಿದಂತೆ ಎಲ್ಲ ಕಡೆಗಳಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣದ ಸದ್ಬಳಕೆ ಮಾಡುವಂತೆ ಬಳಕೆದಾರರಲ್ಲಿ ವಿನಂತಿಸಿದರು‌.

ಮೆಡಿಕಲ್ ಟೂರಿಸಮ್, ಧಾರ್ಮಿಕ ಕ್ಷೇತ್ರಗಳು, ಐತಿಹಾಸಿಕ ಪ್ರದೇಶಗಳು, ಶಿಕ್ಷಣ ವ್ಯವಸ್ಥೆ ಸೇರಿದಂತೆ ಎಲ್ಲವನ್ನೂ #MarvellousMangalore ಹ್ಯಾಷ್ ಟ್ಯಾಗ್ ಮೂಲಕ ಪರಿಚಯಿಸುವ‌ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು. ಮಂಗಳೂರು ನಗರದ ಆರೋಗ್ಯ ಕ್ಷೇತ್ರ,ಶಿಕ್ಷಣ ಕ್ಷೇತ್ರ, ಧಾರ್ಮಿಕ ಕ್ಷೇತ್ರಗಳ ಕುರಿತು ದೇಶಕ್ಕೆ ತಿಳಿಸಲು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮ ಬಳಕೆಯಾಗಲಿ ಎಂದು ಹೇಳಿದರು.


ನಗರದ ಪೇಜ್ ಅಡ್ಮಿನ್, ಬ್ಲಾಗರ್, ಸಾಮಾಜಿಕ ಜಾಲತಾಣ ಬಳಕೆದಾರರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು