5:00 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ…

ಇತ್ತೀಚಿನ ಸುದ್ದಿ

ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ: ವೆಬ್ ಸೈಟ್ ನಲ್ಲಿ ರಿಸಲ್ಟ್ ಚೆಕ್ ಮಾಡುವುದು ಹೇಗೆ?; ಇಲ್ಲಿದೆ ಸಮಗ್ರ ಮಾಹಿತಿ

19/05/2022, 08:17

ಬೆಂಗಳೂರು(reporterkarnataka.com): ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ (ಮೇ 19) 12.30ಕ್ಕೆ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಟ್ವೀಟ್ ಮಾಡಿದ್ದಾರೆ.

ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

“ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ” ಎಂದು ಸಚಿವರು ಶುಭ ಹಾರೈಸಿದ್ದಾರೆ.

2022 ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್‌ 28 ರಿಂದ ಏಪ್ರಿಲ್‌ 11 ರವರಗೆ ನಡೆಸಲಾಗಿತ್ತು. ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಣಿ ಮಾಡಿಕೊಂಡಿದ್ದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಿದ್ದರು.

ಈ ಹಿಂದೆ ಮೇ 15ರಂದು ಫಲಿತಾಂಶವನ್ನು ಪ್ರಕಟಿಸಲಾಗುವುದೆಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿತ್ತು. ಆದರೆ ಸಾಲುಸಾಲು ರಜೆಗಳಿರುವ ಕಾರಣ, ಮೌಲ್ಯಮಾಪನ ಮಾಡುವಲ್ಲಿ ಸ್ವಲ್ಪ ವಿಳಂಭವಾಗಿತ್ತು. ಈಗಾಗಲೇ ಮೌಲ್ಯ ಮಾಪನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಮೌಲ್ಯ ಮಾಪನದಲ್ಲಿನ ಸಣ್ಣಪುಟ್ಟ ದೋಷಗಳಿದ್ದಲ್ಲಿ ಅವುಗಳನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತಿದೆ. ಮೌಲ್ಯಮಾಪನ ಕೆಲಸ ಮುಕ್ತಾಯವಾದ ಮೇಲೆ ಅಂಕಗಳ ದಾಖಲೀಕರಣ ಪೂರ್ಣಗೊಳಿಸಿ ಮೇ 19 ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಫಲಿತಾಂಶ ಚೆಕ್ ಮಾಡುವುದು ಹೇಗೆ?*

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (kseeb) ವೆಬ್‌ಸೈಟ್‌ karresults.nic.in ಗೆ ಭೇಟಿ ನೀಡಿ.

ಪೇಜ್‌ ಓಪನ್‌ ಆದ ಮೇಲೆ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕವನ್ನು Enter ಮಾಡಿಬೇಕು.

ನಂತರ ‘Submit’ ಬಟನ್ ಮೇಲೆ ಕ್ಲಿಕ್ ಮಾಡಿ.

ಆಗ ನಿಮ್ಮ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2022) ಕಾಣುತ್ತದೆ.

ನಿಮ್ಮ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿಕೊಂಡು ರೆಫರೆನ್ಸ್‌ಗಾಗಿ ಪ್ರಿಂಟ್‌ ತೆಗೆದುಕೊಳ್ಳಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು