2:02 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಂಗಳೂರಿನ ರಾಮಕೃಷ್ಣ ಮಠಕ್ಕೆ 75 ವರ್ಷದ ಸಂಭ್ರಮ: ಜೂ.3 ಮತ್ತು 4ರಂದು ಅಮೃತ ಮಹೋತ್ಸವ 

30/05/2022, 21:54

ಮಂಗಳೂರು(reporterkarnataka.com): ಮಂಗಳೂರಿನ ರಾಮಕೃಷ್ಣ ಮಠಕ್ಕೆ ಜೂ.3 ರಂದು 
75 ವರ್ಷ ತುಂಬುವ ಸಲುವಾಗಿ ಜೂ.3 ಮತ್ತು 4 ರಂದು ನಗರದಲ್ಲಿರುವ ರಾಮಕೃಷ್ಣ ಮಠದ ಸಭಾಭವನದಲ್ಲಿ ಅಮೃತ ಮಹೋತ್ಸವ ನಡೆಯಲಿದೆ ಎಂದು ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಹೇಳಿದರು.

ಅವರು ಸೋಮವಾರ ನಗರದ ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಜೂ.3ರಂದು ಬೆಳಿಗ್ಗೆ 6.3೦ರಿಂದ ರಾಮಕೃಷ್ಣ ಪರಮಹಂಸರಿಗೆ ವಿಶೇಷ ಪೂಜೆ ಹಾಗೂ ಹೋಮಗಳು ಕಾಂಚೀಪುರಂನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಸತ್ಯ ವಿದಾನಂದಜಿ ಮಹರಾಜ್ ಅವರು ಸ್ವಾಮಿ ವೀರೇಶ್ವರಾನಂದ ಸಾಧು ನಿವಾಸ ಅಮೃತ ಸದನದಲ್ಲಿ ನೆರವೇರಿಸಲಿದ್ದಾರೆ. 

ಬೆಳಿಗ್ಗೆ 9 ಗಂಟೆಗೆ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಶ್ರೀ ಮಠದ ಮಹಾದ್ವಾರದ ವರೆಗೆ ಸಾಧುಗಳು ಹಾಗೂ ಭಕ್ತರ ನೇತೃತ್ವದಲ್ಲಿ ಶೋಭಾಯಾತ್ರೆ ಹಾಗೂ ಪೂರ್ಣಕುಂಭ ಸ್ವಾಗತ ನಡೆಯಲಿದೆ. ಬೆಳಿಗ್ಗೆ 9.15ಕ್ಕೆ ಬೇಲೂರು ಮಠ ಹಾಗೂ ಪಶ್ಚಿಮ ಬಂಗಾಳದ ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್‌ನ ಉಪಾಧ್ಯಕ್ಷ ಸ್ವಾಮಿ ಗೌತಮಾನಂದಜಿ ಮಹಾರಾಜ್ ಅವರು ಶ್ರೀ ಮಠದ ನೂತನ ಮಹಾದ್ವಾರದ ಲೋಕಾರ್ಪಣೆ ಮಾಡಲಿದ್ದಾರೆ. ಬೆಳಿಗ್ಗೆ 9.30ಕ್ಕೆ ಅಮೃತ ಸದನ ಸ್ವಾಮಿ ವೀರೇಶ್ವರಾನಂದ ಸಾಧು ನಿವಾಸ ಉದ್ಘಾಟನೆ ನೆರವೇರಿಸಲಿದ್ದಾರೆ. ಬೆಳಿಗ್ಗೆ 9.40ಕ್ಕೆ ಅಮೃತ ಭವನ ಸ್ವಾಮಿ ವಿವೇಕಾನಂದ ತರಬೇತಿ ಕೇಂದ್ರದ ನೂತನ ಕಟ್ಟಡಕ್ಕೆ ಭೂಮಿ ಪೂಜೆ ಹಾಗೂ ಅಡಿಗಲ್ಲನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೆರವೇರಿಸಲಿದ್ದಾರೆ ಎಂದರು.

10 ಗಂಟೆಗೆ ಬೇಲೂರು ಮಠ ಹಾಗೂ ಪಶ್ಚಿಮ ಬಂಗಾಳದ ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್‌ನ ಉಪಾಧ್ಯಕ್ಷ ಸ್ವಾಮಿ ಗೌತಮಾನಂದಜಿ ಮಹಾರಾಜ್ ಅವರ ದಿವ್ಯ ಸನ್ನಿಧಾನದಲ್ಲಿ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಹಾಗೂ ಬೇಲೂರು ಹಾಗೂ ಪಶ್ಚಿಮ ಬಂಗಾಳ ಮಠದ ವಿಶ್ವಸ್ಥ ಸ್ವಾಮಿ ಮುಕ್ತಿದಾನಂದಜಿ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ಎನ್. ವಿನಯ್ ಹೆಗ್ಡೆ, ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ನಿಕ್, ಗದಗದ ಶಾಸಕ ಡಿ.ಆರ್ ಪಾಟೀಲ್ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್, ಉದ್ಯಮಿ ದಯಾನಂದ ಪೈ ಭಾಗವಹಿಸಲಿದ್ದಾರೆ ಎಂದರು.

ಜೂ.4 ರಂದು ಸಂಜೆ 4.45ಕ್ಕೆ ಬೇಲೂರು ಮಠ ಹಾಗೂ ಪಶ್ಚಿಮ ಬಂಗಾಳದ ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್‌ನ ಉಪಾಧ್ಯಕ್ಷ ಸ್ವಾಮಿ ಗೌತಮಾನಂದಜಿ ಮಹಾರಾಜ್ ಅವರ ದಿವ್ಯ ಸನ್ನಿಧಾನದಲ್ಲಿ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಹಾಗೂ ಬೇಲೂರು ಹಾಗೂ ಪಶ್ಚಿಮ ಬಂಗಾಳ ಮಠದ ವಿಶ್ವಸ್ಥ ಸ್ವಾಮಿ ಮುಕ್ತಿದಾನಂದಜಿ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಝ್ಯ ಅತಿಥಿಗಳಾಗಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ವೇದವ್ಯಾಸ ಕಾಮತ್, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ನಿಕ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಸಿಇಓ ಡಾ. ಕುಮಾರ್, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಎರಡು ದಿನಗಳಿಲ್ಲಿ 56 ಚಿಂತನ ಮಂಥನಗಳು ನಡೆಯಲಿದ್ದು, 18 ಮಂದಿ ಸರಳತೆಯ ಬಗ್ಗೆ ಮಾತನಾಡಲಿದ್ದಾರೆ. ಈಗಾಗಲೇ ಹೊರಗಿನಿಂದ
400 ಜನ ನೊಂದಣಿ ಮಾಡಿಕೊಂಡಿದ್ದು, ಜಿಲ್ಲೆಯಿಂದ 300-400 ಜನ ಭಾಗವಹಿಸಲಿದ್ದಾರೆ. ದೇಶದಾದ್ಯಂತ 75ಕ್ಕೂ ಹೆಚ್ಚು ಸಾಧುಗಳು ಭಾಗವಹಿಸಲಿದ್ದಾರೆ ಎಂದರು.

ಸ್ವಾಮಿ ಏಕಾನಂದಜಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಮಠದ ಸ್ವಯಂ ಸೇವಕ ದಿಲ್‌ರಾಜ್ ಆಳ್ವ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು