9:01 PM Thursday2 - May 2024
ಬ್ರೇಕಿಂಗ್ ನ್ಯೂಸ್
ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಫಿ, ಟಿಕ್ ಟಾಕ್ ಆಟ: ವಾಹನ ಸವಾರರಿಗೆ ಪ್ರಾಣ ಸಂಕಟ!!

26/06/2022, 21:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್ ಮೂಲಕ ವಿಲ್ಲುಪುರಂ ಮಂಗಳೂರು ರಾಷ್ಟ್ರೀಯ ಹೆದ್ದಾರಿ‌ ಹಾದು ಹೋಗಿದ್ದು, ಪ್ರವಾಸಿಗರು ರಸ್ತೆ ಮಧ್ಯೆ ನಿಂತು ಸೆಲ್ಪಿ ಪೋಟೊ ತೆಗೆಯುತ್ತಿರುವುದು ಮಾಮೂಲಾಗಿದ್ದು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.


ರಸ್ತೆ ಮಧ್ಯೆಯೇ ಟಿಕ್ ಟಾಕ್ ವೀಡಿಯೋ, ಸೆಲ್ಪಿ ತೆಗೆಯುವ ಪ್ರವಾಸಿಗರಿಂದಾಗಿ ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗಿ ವಾಹನಗಳು ಸಾಲುಗಟ್ಟಿ ಕೊಂಡು ಸಾಗುವಂತಾಗಿದೆ. ಕೆಲ ಪ್ರವಾಸಿಗರು ರಸ್ತೆಯ ಮೇಲೆಯೇ ವಾಹನ ನಿಲ್ಲಿಸಿ ಜೋರಾಗಿ ಹಾಡು ಹಾಕಿಕೊಂಡು ನೃತ್ಯ ಮಾಡುತ್ತಿದ್ದು ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಚಾರ್ಮಾಡಿ ಘಾಟ್ ಮಾರ್ಗವಾಗಿ ಪೊಲೀಸ್ ಗಸ್ತು ವಾಹನ ಸಂಚರಿಸುತ್ತಿದ್ದರೂ‌ ಕೂಡ ಪ್ರವಾಸಿಗರ ಸೆಲ್ಪಿ ಪೋಟೊ ಕ್ರೇಜ್ ಗೆ ಕಡಿವಾಣ ಇಲ್ಲದಂತಾಗಿದೆ. ಪೋಟೊ ತೆಗೆಯುವುದನ್ನು ನಿಷೇಧಿಸಿ ಸೂಚನಾ ಫಲಕ ಅಳವಡಿಸಿದ್ದರೂ ಕೂಡ ರಸ್ತೆಯಲ್ಲಿ ನಿಂತು ಪೋಟೊ ತೆಗೆಯುವುದು ಮುಂದುವರಿದಿದ್ದು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು