5:34 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಸಜೀಪ ನಡು ಕಂಚಿನಡ್ಕ ಘನತ್ಯಾಜ್ಯ ಘಟಕದ ಅವ್ಯವಸ್ಥೆಗೆ ಸ್ಥಳೀಯರ ಆಕ್ರೋಶ: ಬೀಗ ಜಡಿದ ಶಾಸಕ ಯು.ಟಿ.ಖಾದರ್

28/06/2022, 21:25

ಬಂಟ್ವಾಳ(reporterkarnataka.com):
ಸಜೀಪ ನಡು ಕಂಚಿನಡ್ಕ ಘನತ್ಯಾಜ್ಯ ಘಟಕದ ಅವ್ಯವಸ್ಥೆ ಕುರಿತು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಸ್ಥಳೀಯರ ಜತೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಯು.ಟಿ.ಖಾದರ್ ಘಟಕಕ್ಕೆ ಬೀಗ ಜಡಿದರು.

ಬಂಟ್ಟಾಳ ಪುರಸಭೆಯ ಘನತ್ಯಾಜ್ಯ ಘಟಕಕ್ಕೆ ಬಂಟ್ವಾಳ ಹೊರ ವಲಯದ ಸಜೀಪ ನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿ 2007ರಲ್ಲಿ ಸ್ಥಳ ನಿಗದಿಪಡಿಸಲಾಗಿತ್ತು.ಆದರೆ ಘಟಕ ನಿರ್ಮಾಣ ಮಾಡಲು ಸ್ಥಳೀಯರ ಭಾರೀ ವಿರೋಧ ವ್ಯಕ್ತವಾಗಿತ್ತು.ಆದರೆ ರಲ್ಲಿ ಹೊಸ ಸರಕಾರ ಬಂದ ನಂತರ ಅದೇ ಸ್ಥಳದಲ್ಲಿ ಘನತ್ಯಾಜ್ಯ ತೆರೆಯುವ ಬಗ್ಗೆ ಸದನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಒತ್ತಾಯಿಸಿದಾಗ ಸ್ಥಳೀಯ ಶಾಸಕ ಯು.ಟಿ.ಖಾದರ್ ರವರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ನಂತರ ಸ್ಪೀಕರ್ ಹಾಗೂ ಸಚಿವರು ಮದ್ಯೆ ಪ್ರವೇಶಿಸಿ ಜಿಲ್ಲಾಡಳಿತ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿತ್ತು.

ಅದರಂತೆ ಅಂದಿನ ಜಿಲ್ಲಾಧಿಕಾರಿಗಳಾದ ಸಿಂದೂ ರೂಪೇಶ್ ರವರು ಶಾಸಕರೂ ಸೇರಿದಂತೆ ಸಹಾಯಕ ಕಮೀಷನರ್ ,ಮಂಗಳೂರು ತಹಶೀಲ್ದಾರ್,ಬಂಟ್ಟಾಳ ತಹಶೀಲ್ದಾರ್,ಬಂಟ್ಟಾಳ ಪುರಸಭೆ ಮುಖ್ಯಾಧಿಕಾರಿ ಹಾಗೂ ಸಜೀಪ ನಡು ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿ ಎಲ್ಲರ ಅಭಿಪ್ರಾಯ ಪಡೆದು ಕೇವಲ ಒಣಕಸ ಮಾತ್ರ ಹಾಕಲು ನಿರ್ಧಾರಕ್ಕೆ ಬಂದು ಅದರಿಂದ ಬರುವ ಆದಾಯವನ್ನು ಸ್ಥಳೀಯ ಪಂಚಾಯತ್ ಗೆ ನೀಡುವ ಒಪ್ಪಂದ ನಡೆಸಿ ಬಂಟ್ವಾಳ ಪುರಸಭೆಗೆ ಸೂಚನೆ ನೀಡಲಾಯಿತು.ನಂತರ ಕೆಲ ಸಮಯಗಳ ಕಾಲ ಕೇವಲ ಒಣಕಸ ಮಾತ್ರ ತಂದು ಅದನ್ನು ವಿಲೇವಾರಿ ಮಾಡುವ ಕೆಲಸ ಚಾಲ್ತಿಯಲ್ಲಿತ್ತು.ಆದರೆ ಕ್ರಮೇಣ ಹಸಿ ಕಸ ಕೂಡಾ ತರಲು ಪ್ರಾರಂಭಿಸಿ ಸತ್ತ ಪ್ರಾಣಿಗಳನ್ನು ಸಮೇತ ತಂದು ಸುರಿದು ಪಚ್ಟನಾಡಿ ತರಹ ಆಗಿ ಯಾರೂ ಕೇಳದ ಪರಿಸ್ಥಿತಿಗೆ ಬಂದು ದಿಕ್ಕು ದೆಸೆಯಿಲ್ಲದಂತಾಗಿತ್ತು.

ಈ ಬಗ್ಗೆ ಸ್ಥಳೀಯ ನಾಗರೀಕರು ಮತ್ತೆ ಶಾಸಕ ಯು.ಟಿ.ಖಾದರ್ ರವರ ಬಳಿ ತಮ್ಮ ಅಹವಾಲು ತಿಳಿಸಿದಾಗ ಶಾಸಕರು ಇಂದು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಸ್ಥಳೀಯರ ನಾಗರೀಕರ ಬಗ್ಗೆ ಕಿಂಚಿತ್ತೂ ಕರುಣೆ ಕಾಳಜಿ ವಹಿಸದೆ ಬಂಟ್ವಾಳ ಪುರಸಭೆಯವರು ಬೇಕಾ ಬಿಟ್ಟಿ ತ್ಯಾಜ್ಯ ಸುರಿಯುತ್ತಿರುವ ಘಟನೆ ಕಣ್ಣಾರೆ ಕಂಡು ದುರ್ವಾಸನೆ ಹಾಗೂ ಅವ್ಯವಸ್ಥೆಯಿಂದ ಸ್ಥಳೀಯ ನಾಗರಿಕರ  ಮೇಲಾಗುವ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ  ಶಾಸಕ ಯು.ಟಿ.ಖಾದರ್ ಘನತ್ಯಾಜ್ಯ ಘಟಕಕ್ಕೆ ಬೀಗ ಜಡಿದರು.ಈ ಬಗ್ಗೆ ಜಿಲ್ಲಾಧಿಕಾರಿಗಳು,ಬಂಟ್ವಾಳ ಶಾಸಕರು,ಪುರಸಭೆ ಮುಖ್ಯಾಧಿಕಾರಿ,ಪುರಸಭೆ ಅಧ್ಯಕ್ಷರನ್ನೂ ಸಂಪರ್ಕಿಸಿದ ಶಾಸಕ ಯು.ಟಿ.ಖಾದರ್ ಘಟಕದ ಅವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಆದಷ್ಟು ಬೇಗನೇ ಪರಿಹಾರ ಕಂಡುಕೊಳ್ಳುವಂತೆ ಸೂಚನೆ ನೀಡಿದರು.ಮುಂದಕ್ಕೆ ಯಾವುದೇ ಕಾರಣಕ್ಕೂ ಹಸಿ ಕಸ ತರಲು ಅನುಮತಿ ನೀಡಬಾರದೆಂದು ನಿರ್ಧರಿಸಿ ಇದನ್ನು ನೋಡಿಕೊಳ್ಳಲು ಸ್ಥಳೀಯರ ಕಾವಲು ಸಮಿತಿಯನ್ನು ಕೂಡಾ ನೇಮಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು