1:23 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಚುನಾವಣೆ: ಎನ್ ಡಿ. ಎ ಅಭ್ಯರ್ಥಿ  ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ: ಮಾಜಿ ಸಿಎಂ ಎಚ್ ಡಿಕೆ ಇಂಗಿತ

30/06/2022, 12:40

ಬೆಂಗಳೂರು(reporterkarnataka.com): ರಾಷ್ಟ್ರಪತಿ ಆಯ್ಕೆ ಸಂಬಂಧ ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ದ್ರೌಪದಿ ಮುರ್ಮು ಅವರಿಗೆ ಬಹುಮತದ ಸಂಖ್ಯೆ ಈಗಾಗಲೇ ಸಿಕ್ಕದೆ. ನಮ್ಮ ಪಕ್ಷದ ಬೆಂಬಲ ಅವಶ್ಯಕತೆ ಇಲ್ಲ. ಆದರೂ ನಮ್ಮ ಬೆಂಬಲ ಕೇಳಿದ್ದಾರೆ. ಅದು ಅವರ ಔದಾರ್ಯ ಎಂದು ಹೇಳಿದರು.

ನನ್ನ ಪ್ರಕಾರ ಮುರ್ಮು ಈಗಾಗಲೇ ಗೆದ್ದಾಗಿದೆ.‌ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಮುರ್ಮು ಅವರು ಎರಡು ಬಾರಿ ದೂರವಾಣಿ ಕರೆ ಮಾಡಿ ಬೆಂಬಲಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರಿಗೆ ಬಂದು ಮನವಿ ಮಾಡಲು‌ ಅವರು ಸಮಯ ಕೋರಿದ್ದರು. ಅವರು ಖುದ್ದು ಬಂದು ಮನವಿ ಮಾಡುವ ಅವಶ್ಯಕತೆ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಚುನಾವಣಾ ಅಭ್ಯರ್ಥಿಯಾಗಿ ಮುರ್ಮು ಕಣದಲ್ಲಿದ್ದಾರೆ. ಅವರ ಹಿನ್ನೆಲೆ ಏನು, ಜೀವನದಲ್ಲಿ ಎಷ್ಟು ಕಷ್ಟ ಅನುಭವಿಸಿದ್ದಾರೆ, ತಳಮಟ್ಟದ ಸಮುದಾಯದಿಂದ ಹೇಗೆ ಬೆಳೆದು ಬಂದಿದ್ದಾರೆ ಎಂಬುದನ್ನು ನಾನು ಅರಿತಿದ್ದೇನೆ. ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸ್ಪೂರ್ತಿದಾಯಕ ಎಂದು ಹೇಳಿದರು.

ಇನ್ನು ಇಲ್ಲಿ ಕಾಂಗ್ರೆಸ್, ಬಿಜೆಪಿ ಅನ್ನುವ ಪ್ರಶ್ನೆ ಅಲ್ಲ. ಬಿ ಟೀಂ ಅನ್ನುವ ಪ್ರಶ್ನೆಯೂ ರಾಷ್ಟ್ರಪತಿ ಚುನಾವಣೆಯಲ್ಲಿ ಬರಲ್ಲ. ನಾವು ತೆಗೆದುಕೊಂಡ ನಿರ್ಧಾರ ಬಿಜೆಪಿ ಬಿ ಟೀಂ ಅಂತ ಪ್ರಚಾರ ಮಾಡೋದು ಇದಕ್ಕೆ ಅನ್ವಯ ಆಗಲ್ಲ ಎಂದು ಅವರು ಪರೋಕ್ಷವಾಗಿ ಸಿದ್ದರಾಮಯ್ಯ ಮೇಲೆ ಚಾಟಿ ಬೀಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು