5:53 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಹಗರಿಬೊಮ್ಮನಹಳ್ಳಿಯ ನಾಣ್ಯಾಪುರ ಗ್ರಾಮದಲ್ಲಿಯೇ ಪಡಿತರ ವಿತರಣೆ ಕ್ರಮ: ವಂದೇ ಮಾತರಂ ಆಗ್ರಹ

03/07/2022, 20:33

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಣ್ಯಾಪುರ ಗ್ರಾಮದಲ್ಲಿ 300 ಮಂದಿ ಪಡಿತರ ಚೀಟಿಗಮ ಪಲಾನುಭವಿಗಳಿದ್ದು, ಪಡಿತರ ಪಡೆಯಲು 2 ಕಿಮೀ ದೂರದ ಹೊಸಕೇರಿ ಗ್ರಾಮದಲ್ಲಿರುವ ನ್ಯಾಯಬೆಲೆ ಅಂಗಡಿಗೆ ತೆರಳಬೇಕಾದ ದುಸ್ಥಿತಿ ಎದುರಾಗಿದೆ.

ಇದರಿಂದ ಸರ್ಕಾರ ನೀಡುವ ಉಚಿತ ಪಡಿತರ ಧಾನ್ಯ ನಾಣ್ಯಾಪುರ ಪಡಿತರ ಫಲಾನುಭವಿಗಳಿಗೆ, ಬಲು ದುಬಾರಿಯಾಗಿ ಪರಿಣಮಿಸಿದೆ. ಕಾರಣ 2 ಕಿಮೀ ಕ್ರಮಿಸಲು ಪಡಿತರ ಪಲಾನುಭವಿಗಳು ಆಟೋಗಳನ್ನು ಅವಲಂಬಿಸಬೇಕಾಗಿದೆ. ಇವರು ಪಡಿತರ ಪಡೆಯಲು ಪ್ರತಿ ತಿಂಗಳು 20ರಿಂದ 30 ರೂ. ವ್ಯಯಿಸಬೇಕಿದೆ. ತಾಲೂಕಾಡಳಿತ ಹಾಗೂ ಆಹಾರ ಇಲಾಖೆಯ ಅವೈಜ್ಞಾನಿಕ ಕ್ರಮದಿಂದಾಗಿ, ಸರ್ಕಾರ ಕೊಡೋ ಪುಕ್ಕಟೆ ಪಡಿತರ ನಾಣ್ಯಾಪುರ ಗ್ರಾಮಸ್ಥರಿಗೆ ಬಲು ದುಬಾರಿಯಾಗಿ ಪರಿಣಮಿಸಿದೆ. ವೃದ್ಧರು, ಮಹಿಳೆಯರು, ಮಕ್ಕಳು ಪಡಿತರ ಧಾನ್ಯ ಹೊಂದಲು ಹಣ ಖರ್ಚು ಮಾಡಲೇಬೇಕಿದೆ. ಇದು ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಇದು ಸರ್ಕಾರ ಆಹಾರ ಭದ್ರತೆ ನಿಯಮ ಉಲ್ಲಂಘನೆಯಾಗಿದೆ ಎಂದು ಹೋರಾಟಗಾರರಿಂದ ಖಂಡನೆ ವ್ಯಕ್ತವಾಗಿದೆ. ಸಂಬಂಧಿಸಿದಂತೆ ವಂದೇ ಮಾತರಂ ಜಾಗೃತಿ ವೇದಿಕೆ ಮುಖಂಡ ವಿ.ಜಿ.ವೃಷಭೇಂದ್ರ ಮಾತನಾಡಿ, ಆಹಾರ ಭದ್ರತಾ ಕಾಯ್ದೆ ಅನ್ವಯ 250 ಪಡಿತರ ಚೀಟಿ ಇರುವೆಡೆ, ಪಲಾನುಭವಿಗಳಿಗೆ ಪಡಿತರ ವಿತರಿಸುವಂತೆ ಸರ್ಕಾರ ನಿಯಮ ರೂಪಿಸಿದೆ. ಇಲ್ಲಿ ನ್ಯಾಯಬೆಲೆ ಅಂಗಡಿಯವರು ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ತಹಶಿಲ್ದಾರರು ಶೀಘ್ರವೇ ಸೂಕ್ತ ಕ್ರಮ ಜರುಗಿಸಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ. 

ಹೆಚ್ಚಾಗಿ ಪರಿಶಿಷ್ಟ ಜಾತಿ ಪಂಗಡ ಇರೋ ನಾಣ್ಯಾಪುರ ಗ್ರಾಮದಲ್ಲಿ, ಕಡು ಬಡವರು ಕಾರ್ಮಿಕರು, ರೈತಾಪಿ ವರ್ಗದವರಿದ್ದು, ಅವರಿಗೆ ಹೆಚ್ಚುವರಿ ಖರ್ಚಿನ ಹೊರೆ ಬೀಳಲಿದೆ. ಕಾರಣ ಜಿಲ್ಲಾಧಿಕಾರಿಗಳು ಶೀಘ್ರವೇ ಗಮನಿಸಬೇಕು. ಜುಲೈ ತಿಂಗಳ ಪಡಿತರವನ್ನು ನಾಣ್ಯಾಪುರ ಗ್ರಾಮದಲ್ಲಿಯೇ ವಿತರಿಸುವಂತೆ ಕ್ರಮ ಜರುಗಿಸಬೇಕಿದೆ. ತಹಶೀಲ್ದಾರರಾದ ಶರಣಮ್ಮ ಅವರು ಪ್ರಾಮಾಣಿಕರು ಜನಪರ ಕಾಳಜಿ ಉಳ್ಳವರಾಗಿದ್ದಾರೆ, ಸಂಬಂಧಿಸಿದಂತೆ  ಅವರು ಖುದ್ದು ಪರಿಶೀಲಿಸಿ ನಾಣ್ಯಾಪುರದಲ್ಲಿ ಪಡಿತರ ವಿತರಿಸುವಂತೆ ಕ್ರಮ ಕೈಗೊಳ್ಳಬೇಕಿದೆ ಎಂದು ವೃಷಭೇಂದ್ರ ಒತ್ತಾಯಿಸಿದ್ದಾರೆ. 

ನಿರ್ಲಕ್ಷ್ಯ ತೋರಿದ್ದಲ್ಲಿ ಅಥವಾ ಇನ್ನಾವುದೇ ಕಾರಣಕ್ಕೆ ಕೋರಿಕೆಗೆ ಸ್ಪಂದಿಸದಿದ್ದಲ್ಲಿ,  ನ್ಯಾಯಬೆಲೆ ಅಂಗಡಿಯಲ್ಲಿ ಜರುಗುವ ಅಕ್ರಮ ಹಾಗೂ ಅವ್ಯವಹಾರಗಳ ಕುರಿತಂತೆ ದೂರು ನೀಡಲಾಗುವುದು. ಸಂಬಂಧಿಸಿದಂತೆ ವಂದೇ ಮಾತರಂ ಜಾಗೃತಿ ವೇದಿಕೆ ಹಗರಿಬೊಮ್ಮನಹಳ್ಳಿ ಘಟಕ ದಿಂದ, ಕಾನೂನು ರೀತ್ಯಾ ಹೋರಾಟ ನಡೆಸಲಾಗುವುದೆಂದು ಅವರು ಈ ಮೂಲಕ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು