12:47 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಬಂಟ್ವಾಳದ ಅಮ್ಮೆಮಾರು ಸಮೀಪದ ಗುಡ್ಡ ಕುಸಿತ: ಮನೆಗೆ ತೀವ್ರ ಹಾನಿ, ಬಿರುಕು ಬಿಟ್ಟ ಗೋಡೆ; ಆತಂಕ ಹೆಚ್ಚಿಸಿದ ಮಳೆ

04/07/2022, 10:10

ಸಾಂದರ್ಭಿಕ ಚಿತ್ರ
ಬಂಟ್ವಾಳ(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಅಮ್ಮೆಮಾರಿನಲ್ಲಿ ಭೂ ಕುಸಿತ ಉಂಟಾಗಿ ಮನೆಯೊಂದು ಅಪಾಯಕ್ಕೆ ಸಿಲುಕಿದೆ.

ಅಮ್ಮೆಮಾರು ಸಮೀಪದ ಪದೆಂಜಾರ್ ಎಂಬಲ್ಲಿ ಪರಿಶಿಷ್ಠ ಜಾತಿಗೆ ಸೇರಿದ ನಾರಾಯಣ ಮುಕಾರಿ ಎಂಬವರ ಮನೆ ಅಪಾಯಕ್ಕೆ ಸಿಲುಕಿದೆ. ಮನೆಯ ಹಿಂಭಾಗದ ಒಂದು ಪಾರ್ಶ್ವದ ಮಣ್ಣು ಸಂಪೂರ್ಣ ಕುಸಿದು ಮನೆ ಅಪಾಯಕ್ಕೆ ಸಿಲುಕಿದೆ. ಭೂ ಕುಸಿತಕ್ಕೆ ಹಿಂಭಾಗದ ಕಲ್ಲುಗಳು ಕೆಲಭಾಗದಲ್ಲಿ ಹರಿಯುತ್ತಿರುವ ತೊರೆ ಪಾಲಾಗಿದೆ. ಗೋಡೆಗಳು ಬಿರುಕು ಬಿಟ್ಟಿದ್ದು ಇದೇ ರೀತಿ ಮಳೆ ಸುರಿದರೆ ಇಡೀ ಮನೆಯೇ ಧರಶಾಹಿಯಾಗುವ ಆತಂಕ ಎದುರಾಗಿದೆ.

ಮುಕಾರಿ ಅವರದ್ದು ಅವಿಭಕ್ತ ಕುಟುಂಬವಾಗಿದ್ದು, ಮಕ್ಕಳು ಹಿರಿಯರು ಸೇರಿ 15 ಮಂದಿ ಮನೆಯಲ್ಲಿ ವಾಸವಾಗಿದ್ದಾರೆ.

ನಿರಂತರ ಮಳೆಯಿಂದಾಗಿ ಇನ್ನಷ್ಟು ಅಪಾಯಕ್ಕೀಡಾಗುವ ಆತಂಕ ಎದುರಾಗಿದೆ. ಮನೆಯಲ್ಲಿ ವಾಸಿಸುವುದೇ ಅಪಾಯಕಾರಿ ಎನ್ನುವ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಪರ್ಯಾಯ ವ್ಯವಸ್ಥೆಗೆ ಮನೆಮಂದಿ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು