6:57 PM Thursday25 - April 2024
ಬ್ರೇಕಿಂಗ್ ನ್ಯೂಸ್
ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ…

ಇತ್ತೀಚಿನ ಸುದ್ದಿ

ಪ್ರಧಾನಿ ಭದ್ರತೆಯಲ್ಲಿ ಮತ್ತೆ ಲೋಪ: ಹೆಲಿಕಾಪ್ಟರ್ ಬಳಿ ಹಾರಿ ಬಂದ ಪ್ರತಿಭಟನಾಕಾರರ ಬಲೂನ್

05/07/2022, 09:05

ವಿಜಯವಾಡ(reporterkarnataka.com):ಆಂಧ್ರಪ್ರದೇಶದ ವಿಜಯವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪವಾಗಿದೆ.

ಈ ಹಿಂದೆ ಪಂಜಾಬ್‌ನಲ್ಲಿ ಭದ್ರತಾ ಲೋಪದ ಬಳಿಕ ಇದೀಗ ಮತ್ತೆ ಆಂಧ್ರಪ್ರದೇಶದಲ್ಲಿ ಇದೇ ರೀತಿ ಘಟನೆ ನಡೆದಿದ್ದು, ಪ್ರಧಾನಿ ಮೋದಿಯ ಹೆಲಿಕಾಪ್ಟರ್ ಸನಿಹದಲ್ಲಿ ಪ್ರತಿಭಟನಕಾರರ ಬಲೂನ್ ಹಾರಿ ಬಂದಿದೆ. 

ಪ್ರಧಾನಿ ಹೆಲಿಕಾಪ್ಟರ್ ಬಳಿ ಬಲೂನ್ ಹಾರಿ ಬಂದಿರುವುದರಿಂದ ಸ್ವಲ್ಪ ಹೊತ್ತು ಆತಂಕದ ವಾತವಾರಣ ನಿರ್ಮಾಣವಾಗಿತ್ತು.

ಮೋದಿ ಕಾರ್ಯಕ್ರಮದ ಹೊರಭಾಗದಲ್ಲಿ ಹಾಗೂ ಮೋದಿ ಹೆಲಿಕಾಪ್ಟರ್ ಮೂಲಕ ತೆರಳು ಮಾರ್ಗದಲ್ಲಿ ಪ್ರತಿಭಟನೆ ವೇಳೆ ಬಲೂನ್ ಹಾರಿಬಿಟ್ಟ ಭದ್ರತಾ ಲೋಪವೆಸಗಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೋದಿ ಕಾರ್ಯಕ್ರಮದ ಹೊರಭಾಗದಲ್ಲಿ ಈ ಬಲೂನ್‌‌ಗಳನ್ನು ಹಾರಿ ಬಿಡಲಾಗಿದೆ. ಹಾರಿಬಿಟ್ಟ ದೊಡ್ಡ ಗಾತ್ರದ ಬಲೂನ್‌ಗಳು ಆಗಸದಲ್ಲಿ ತೇಲಾಡಿದೆ. ಇತ್ತ ಕಾರ್ಯಕ್ರಮದ ಮುಗಿಸಿ ಮೋದಿ ಹೆಲಿಕಾಪ್ಟರ್ ಏರಿ ಪ್ರಯಾಣ ಆರಂಭಿಸಿದರು. ಹೆಲಿಕಾಪ್ಟರ್ ಟೇಕ್ ಆಫ್ ಆಗಿ ಮೇಲಕ್ಕೆ ಹಾರುತ್ತಿದ್ದಂತೆ ಪ್ರತಿಭಟನಾಕಾರರ ಬಲೂನ್ ಅಡ್ಡಬಂದಿದೆ. ಆದರೆ ಪೈಲೈಟ್ ಸಮಯಪ್ರಜ್ಞೆಯಿಂದ ಬಹುದೊಡ್ಡ ಅಪಾಯ ತಪ್ಪಿದೆ.

ಇದು ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ನಡೆದ ಎರಡನೇ ಲೋಪವಾಗಿದೆ.

ಪಂಜಾಬ್ ಭೇಟಿಯಲ್ಲಿ ನಡೆದಿತ್ತು ಭದ್ರತಾ ಲೋಪ ಪಂಜಾಬ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಈ ಹಿಂದೆ ನಡೆದಿತ್ತು. . ಪರಿಣಾಮ, ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು