6:48 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕೋಟಿ ವೆಚ್ಚದ ರಸ್ತೆ 2 ತಿಂಗಳಲ್ಲೇ ಢಮಾರ್!; ಕಳಪೆ ಕಾಮಗಾರಿಯ ನಿಜ ಬಣ್ಣ ಬಯಲು!!

05/08/2022, 18:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂದು

info.reporterkarnataka@gmail.com

ಕೋಟಿ ವೆಚ್ಚ ಮಾಡಿ ಹೊಸತಾಗಿ ನಿರ್ಮಿಸಿದ ಡಾಮರು ರಸ್ತೆ ಎರಡೇ ತಿಂಗಳಲ್ಲಿ ಕಿತ್ತು ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ತಿರುಗುಣ ಗ್ರಾಮದಲ್ಲಿ ನಡೆದಿದೆ.

ಕಳಪೆ ಕಾಮಗಾರಿಯಿಂದ ಕೋಟಿ ವೆಚ್ಚದ ರಸ್ತೆ ಕೆಟ್ಟು ಹೋಗಿದೆ. ಕಿತ್ತು ಬರ್ತೀರೋ ಟಾರ್ ಕಂಡು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಸ್ತೆಗೆ ಹಾಕಿದ ಡಾಮರು ಚಾಪೆಯಂತೆ ಎದ್ದೇಳುತ್ತಿದೆ. ಇದನ್ನು ಕಂಡು ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ.


ರಸ್ತೆ ಮಾಡಲು ತಮ್ಮ ಸ್ವಂತ ಜಮೀನನ್ನು ಕೂಡ ರೈತರು ಬಿಟ್ಟುಕೊಟ್ಟಿದ್ದರು. ಇದೀಗ ಎರಡೇ ಎರಡು ತಿಂಗಳಲ್ಲಿ ಕಳಪೆ ರಸ್ತೆಯ ನಿಜಬಣ್ಣ ಬಯಲಾಗಿದೆ.

ಗುತ್ತಿಗೆದಾರ ಹುಲಿಯಪ್ಪಗೌಡ ಎಂಬುವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಗುತ್ತಿಗೆದಾರ, ಎಂಜಿನಿಯರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಗೆ ಕಳಪೆ ಕಾಮಗಾರಿಯ ಕರ್ಮಕಾಂಡ ಬೆಳಕಿಗೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು