1:40 AM Friday19 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಸುಲಿಗೆ, ಮನೆ, ವಾಹನ ಕಳ್ಳತನ ಪ್ರಕರಣ: 3 ಮಂದಿ ಆರೋಪಿಗಳ ಬಂಧನ; ಲಕ್ಷಾಂತರ ಮೌಲ್ಯದ ಸೊತ್ತು ವಶ

07/08/2022, 19:26

ಉಡುಪಿ(Reporterkarnataka.com):
ಸುಲಿಗೆ, ಮನೆ ಕಳವು ಹಾಗೂ ವಾಹನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಬಜ್ಪೆ ಕುರ್ಸುಗುಡ್ಡೆ ನಿವಾಸಿ ಮಹಮ್ಮದ್ ಆರೀಫ್ ಅಲಿಯಾಸ್ ಮುನ್ನ (37), ಮಹಮ್ಮದ್ ಮುನೀರ್ (24) ಮತ್ತು ಅಕ್ಬರ್ (36) ಎಂದು ಗುರುತಿಸಲಾಗಿದೆ.

ವೃದ್ದೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ, ಉಚ್ಚಿಲ ಪಣಿಯೂರು ಹೋಗುವ ದಾರಿಯಲ್ಲಿರುವ ಮನೆಯೊಂದರಿಂದ ರೂಪಾಯಿ 2,52,000/- ಹಣ ಕಳವು, ಪಡುಬಿದ್ರಿ, ಉಚ್ಚಿಲ, ಕಟಪಾಡಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪಡುಬಿದ್ರಿ ಮತ್ತು ಕಾಪು ಠಾಣೆಗಳಲ್ಲಿ ಕಳವು ಪ್ರಕರಣ ದಾಖಲಾಗಿದ್ದವು.

ಕಾಪು ವೃತ್ತ ನಿರೀಕ್ಷಕರ ನೇತೃತ್ವದಲ್ಲಿ‌ ಯಶಸ್ವೀ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ ಆರೋಪಿಗಳಾದ ಮಹಮ್ಮದ್ ಆರೀಫ್‌ ಅಲಿಯಾಸ್ ಮುನ್ನ, ಮಹಮ್ಮದ್ ಮುನೀರ್ ಮತ್ತು ಅಕ್ಬರ್‌ ಎಂಬವರನ್ನು ಬಂಧಿಸಿ, 2 ½ ಪವನ್ ತೂಕದ ಚಿನ್ನದ ಸರ, ಮೊಬೈಲ್ ಪೋನ್-1, ನಗದು ರೂಪಾಯಿ 61,000/-, ಕಳವು ಮಾಡಿದ 3 ದ್ವಿಚಕ್ರ ವಾಹನ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾ-1, ಮೋಟಾರು ಸೈಕಲ್ -1 ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 2,99 ಲಕ್ಷ ರೂ. ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು