6:35 PM Tuesday16 - April 2024
ಬ್ರೇಕಿಂಗ್ ನ್ಯೂಸ್
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ…

ಇತ್ತೀಚಿನ ಸುದ್ದಿ

ರಸ್ತೆ ಗುಂಡಿಗೆ ಬಲಿಯಾದ ಎಂಜಿನಿಯರಿಂಗ್ ವಿದ್ಯಾರ್ಥಿ: ಅಧಿಕಾರಿಗಳ ನಿರ್ಲಕ್ಷ ವಿರುದ್ಧ ಗೆಳೆಯನಿಂದ ಒಂಟಿ ಪ್ರತಿಭಟನೆ!!

12/08/2022, 00:09

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಾಣ ಕಳೆದುಕೊಂಡ ತನ್ನ ಆತ್ಮೀಯ ಗೆಳೆಯನ ಸಾವಿಗೆ ನ್ಯಾಯ ಕೊಡುವಂತೆ ಆಗ್ರಹಿಸಿ ಆತನ ಗೆಳೆಯನೊಬ್ಬ ನಗರದ ಲಾಲ್ ಬಾಗ್ ನಲ್ಲಿರುವ ಮಂಗಳೂರು ಮಹಾನಗರಪಾಲಿಕೆ ಕಚೇರಿ ಎದುರು ಒಂಟಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.



ನಂತೂರಿನಿಂದ ಬಿಕರ್ಣಕಟ್ಟೆ ಕಡೆಗೆ ಕೈನೆಟಿಕ್ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ, ದೇರೆಬೈಲ್ ಕೊಂಚಾಡಿಯ ಆತೀಶ್ ಶೆಟ್ಟಿ ಅವರು ರಸ್ತೆ ಹೊಂಡಾ ತಿಳಿಯದೆ ಹೊಂಡಾಕ್ಕೆ ಬಿದ್ದು ಸ್ಕೂಟರ್ ಪಲ್ಟಿಯಾಗಿ ಪಕ್ಕದ ಡಿವೈಡರ್ ಮೇಲೆ ಬಿದ್ದಿದ್ದರು. ಬಿದ್ದ ಏಟಿಗೆ ತಲೆಯಲ್ಲಿ ತೀವ್ರ ರಕ್ತಸ್ರಾವವಾಗಿ ಅವರು ಸಾವನ್ನಪ್ಪಿದ್ದರು. ತನ್ನ ಗೆಳೆಯನ ಸಾವಿನಿಂದ ತೀವ್ರವಾಗಿ ನೊಂದ ಲಿಖಿತ್  ರೈ  ಅವರು ರಸ್ತೆಯ ಗುಂಡಿಗಳಿಂದ ಸ್ವಾತಂತ್ರ್ಯ ಸಿಗಬೇಕು ಹಾಗೂ ಆತಿಶ್‌ಗೆ ನ್ಯಾಯ ದೊರಕಬೇಕು ಎಂದು ಆಗ್ರಹಿಸಿ ಕೈಯಲ್ಲಿ ದೊಡ್ಡ ಪೋಸ್ಟರ್ ಹಿಡಿದು

ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಏಕಾಂಗಿ ಪ್ರತಿಭಟನೆ ಮಾಡಿ ಸಾರ್ವಜನಿಕರ ಗಮನ ಸೆಳೆದರು. ಲಿಖಿತ್ ರೈ ಅವರ ಹೋರಾಟಕ್ಕೆ ಎಲ್ಲಡೆಯಿಂದ ಶ್ಲಾಘನೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು