10:34 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಯಡಿಯೂರಪ್ಪಗೆ ಸ್ಥಾನ: ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ

17/08/2022, 23:20

ಬೆಂಗಳೂರು(reporterkarnataka.com): ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯಲ್ಲಿ ರಾಜ್ಯದ ಇಬ್ಬರು ಪ್ರಮುಖ ನಾಯಕರು ನೇಮಕಗೊಂಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಉನ್ನತ ನಾಯಕತ್ವ ಕೈಗೊಂಡಿರುವ ನಿರ್ಧಾರವನ್ನು ನಳಿನ್ ಸ್ವಾಗತಿಸಿದ್ದಾರೆ.

ರಾಜ್ಯ ಪಕ್ಷದ ಹಿರಿಯರು, ಮಾರ್ಗದರ್ಶಕರು ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಸಂಸದೀಯ ಮಂಡಳಿಗೆ ಸೇರಿಸಿಕೊಂಡಿರುವುದು ಮಹತ್ವದ ನಡೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಕ್ಷವನ್ನು ಸಂಘಟಿಸುವ ಮತ್ತು ದೇಶದಾದ್ಯಂತ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅವರಿಗೆ ವೈಯಕ್ತಿಕವಾಗಿ ಹಾಗೂ ಪಕ್ಷದ ರಾಜ್ಯ ಘಟಕದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು