5:52 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ; ಸಾವು

22/08/2022, 00:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮಲೆನಾಡು ಭಾಗ ಮೂಡಿಗೆರೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ನಿರಂತರ ಹುಲಿ ದಾಳಿ ಮುಂದುವರಿದಿದ್ದು, ಎಸ್ಟೇಟ್ ನ  ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಹಸುವೊಂದನ್ನು ಹುಲಿ ಕೊಂದು ಹಾಕಿರುವ ಘಟನೆ ನಡೆದಿದೆ.

ಮೂಡಿಗೆರೆ ತಾಲ್ಲೂಕಿನ ಮತ್ತಿಕಟ್ಟೆ ಗ್ರಾಮದಲ್ಲಿರುವ ಎಸ್ಟೇಟ್ ನ ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.

ಸಂತೋಷ್ ಎಂಬುವರಿಗೆ ಸೇರಿದ್ದ ಹಸು ಇದಾಗಿದೆ.


ಉಪವಲಯ ಅರಣ್ಯ ಅಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ನರಭಕ್ಷಕ ಹುಲಿ ಅಲ್ಲಲ್ಲಿ ಹಸುಗಳ ಮೇಲೆ ನಿರಂತರ ದಾಳಿ ಮಾಡುತ್ತಿದ್ದು , ಸ್ಥಳೀಯರಲ್ಲಿ ಆತಂಕ ಮನೆ ಮಾಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ  ಹುಲಿಯನ್ನು ಹಿಡಿಯಬೇಕು ಎಂದು ರೈತರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನಲ್ಲಿರುವ ಅರಣ್ಯ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡುತ್ತೇವೆ ಎಂದು  ಗ್ರಾಮಸ್ಥರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು