1:58 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮಡಿಕೇರಿ ಚಲೋಗೆ ಮಹತ್ವ ಬೇಡ; ಇದು ಜನಹಿತ ಪಾದಯಾತ್ರೆಯಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

23/08/2022, 11:16

ಹಾಸನ (reporterkarnataka.com): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಆ.26 ರಂದು ಕಾಂಗ್ರೆಸ್‌ ಹಮ್ಮಿಕೊಂಡಿರುವ ಮಡಿಕೇರಿ ಚಲೋ ಮತ್ತು ಎಸ್ಪಿ ಕಚೇರಿ ಮುತ್ತಿಗೆ ಕಾರ್ಯಕ್ರಮಕ್ಕೆ ನಾನೇನು ಮಹತ್ವ ಕೊಡುವುದಿಲ್ಲ, ಜನವೂ ಮಹತ್ವ ಕೊಡದೆ ಇರುವುದೇ ಒಳಿತು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಅದೇನು ಜನಗಳ ಪರವಾಗಿ, ಜನತೆಯ ಹಿತಕ್ಕಾಗಿ ಮಾಡುತ್ತಿರುವ ಪಾದಯಾತ್ರೆಯೇನಲ್ಲ. ಅದಕ್ಕೆ ಜನ ಯಾವುದೇ ರೀತಿಯ ಪ್ರೋತ್ಸಾಹ ಕೊಡದಿರುವುದು ಒಳಿತು. ವಿರೋಧ ಪಕ್ಷದ ನಾಯಕರ ಮೇಲೆ ಮೊಟ್ಟೆಎಸೆದರು ಅಂತ ಅದಕ್ಕೊಂದು ಪಾದಯಾತ್ರೆ, ಅದರ ವಿರುದ್ಧವಾಗಿ ಇನ್ನೊಂದು ಪಾದಯಾತ್ರೆ. ಎರಡು ರಾಷ್ಟ್ರೀಯ ಪಕ್ಷಗಳ ಬೇಜವಾಬ್ದಾರಿ ನಡವಳಿಕೆ ರಾಜ್ಯದ ಜನತೆಯ ಸಮಸ್ಯೆಗೆ ಪೂರಕವಾದುದಲ್ಲ. ಎರಡೂ ಪಕ್ಷಗಳಿಗೆ ಭಗವಂತನೇ ಬುದ್ಧಿಕೊಡಬೇಕೆಂಬುದು ನನ್ನ ಅಭಿಪ್ರಾಯ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು