5:08 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಭವಿಷ್ಯದ ದೃಷ್ಟಿಯಲ್ಲಿಟ್ಟುಕೊಂಡು ರಸ್ತೆ, ಚರಂಡಿ ಹಾಗೂ ರಾಜಕಾಲುವೆಗಳ ಅಭಿವೃದ್ಧಿ: ಶಾಸಕ ವೇದವ್ಯಾಸ ಕಾಮತ್

16/09/2022, 21:38

ಮಂಗಳೂರು(reporterkarnataka.com): ನಗರದ ಬೆಳವಣಿಗೆ ಹಾಗೂ ಮುಂದಿನ ಭವಿಷ್ಯದ ಕುರಿತು ದೂರಾಲೋಚನೆಯಿಂದ ರಸ್ತೆ, ಚರಂಡಿ ಹಾಗೂ ರಾಜಕಾಲುವೆಗಳ ಅಭಿವೃದ್ಧಿಯ ಕುರಿತು ಯೋಜನೆ ರೂಪಿಸಲಾಗುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಕಂಕನಾಡಿ ವಾರ್ಡಿನ ಪ್ರಗತಿ ನಗರದಲ್ಲಿ ರಸ್ತೆ ಹಾಗೂ ಒಳಚರಂಡಿ ವ್ಯವಸ್ಥೆಯ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರದಲ್ಲಿ ರಸ್ತೆ ನಿರ್ಮಾಣದೊಂದಿಗೆ ಒಳಚರಂಡಿ ವ್ಯವಸ್ಥೆ, ರಾಜಕಾಲುವೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ಕೃತಕ ನೆರೆ ಹಾವಳಿ ಉಂಟಾಗದಂತೆ ಎಚ್ಚರಿಕೆ ವಹಿಸುವ ದೃಷ್ಟಿಯಿಂದ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪಾಲಿಕೆ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಶೋಭಾ ಪೂಜಾರಿ, ವೀಣಾ ಮಂಗಳ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ‌ ಶೆಟ್ಟಿ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಕಿರಣ್ ರೈ, ಭರತ್ ರಾಜ್ ಶೆಟ್ಟಿ, ಸುಕೇಶ್ ಅಳಪೆ, ಸತೀಶ್ ರೈ, ಮಾನಸ ರೈ, ರಾಮಚಂದ್ರ ಆಳ್ವ, ಜಯಂತ್ ಭವಾನಿ, ಬಾಬು ಪುಜಾರಿ, ಸಂತೋಷ್ ಕಾವುಬೈಲ್, ಸಂದೇಶ್ ಕಾವುಬೈಲ್, ನಾರಾಯಣ್ ನಾಯಕ್, ಚೇತನ್, ರಕ್ಷಿತ್ ನಾಯಕ್, ರೇಖಾ ಶೆಟ್ಟಿ, ವೀಣಾ ರೈ, ಸುಮಾ ನಾಯಕ್, ಅರುಣ ನಾಯಕ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು