5:14 PM Wednesday24 - April 2024
ಬ್ರೇಕಿಂಗ್ ನ್ಯೂಸ್
ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್…

ಇತ್ತೀಚಿನ ಸುದ್ದಿ

ಕುಂದಾಪುರ, ಬೈಂದೂರು: ಅಕ್ರಮ ಮರಳುಗಾರಿಕೆ ಧಕ್ಕೆಗೆ ಗಣಿ ಇಲಾಖೆ ತಂಡ ದಾಳಿ: 3 ಲಾರಿ ವಶ

21/09/2022, 21:02

ಕುಂದಾಪುರ(reporterkarnataka.com);ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ಮುಂಜಾನೆ ಎರಡು ಕಡೆಗಳಲ್ಲಿ  ಗಣಿ ಮತ್ತು ಭೂವಿಜ್ಞಾನ ಇಲಾಖೆಯ  ಭೂವಿಜ್ಞಾನಿ ಸಂಧ್ಯಾ ಅವರು ದಾಳಿ ನಡೆಸಿ 3 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. 

ಕುಂದಾಪುರ ತಾಲೂಕು ತ್ರಾಸಿ,  ಮೊವಾಡಿ ಗ್ರಾಮ ಹಾಗೂ ಬೈಂದೂರು ತಾಲೂಕಿನ ಮರವಂತೆ ಹಾಗೂ ಬಡಾಕೆರೆ ಗ್ರಾಮ ವ್ಯಾಪ್ತಿಯಲ್ಲಿ ಸೌಪರ್ಣಿಕಾ ನದಿಯಿಂದ  ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಟ ನಡೆಸುತ್ತಿರುವ ಬಗ್ಗೆ  ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ..

ತ್ರಾಸಿ ಗ್ರಾಮದ ಆನಗೋಡು ಎಂಬಲ್ಲಿ ದಾಳಿ ನಡೆಸಿ ಮರಳು ತುಂಬಲು ದಕ್ಕೆಯಲ್ಲಿ ನಿಂತಿದ್ದ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅರಮ ದೇವಸ್ಥಾನದ  ಹತ್ತಿರದ ಅನಧಿಕೃತ ಮರಳು ಗಣಿಗಾರಿಕೆ ದಕ್ಕೆಗೆ ದಾಳಿ ನಡೆಸಿ ಮರಳು ತುಂಬಲು ದಕ್ಕೆಯಲ್ಲಿ ನಿಂತಿದ್ದ 2 ಟಿಪ್ಪರ್  ಲಾರಿಗಳನ್ನು  ವಶಕ್ಕೆ ತೆಗೆದುಕೊಂಡಿದ್ದಾರೆ. ತ್ರಾಸಿ ವ್ಯಾಪ್ತಿಯ ಅನಧಿಕೃತ ಮರಳು ದಕ್ಕೆಗಳಿಗೆ ದಾಳಿಯಾಗುತ್ತಿದ್ದಂತೆ, ಕುಂದಾಪುರ ವ್ಯಾಪ್ತಿಯ ಹಕ್ಲಾಡಿ, ಕಾವ್ರಾಡಿ , ಹಳ್ನಾಡು, ಅಂಪಾರು ಹಾಗೂ ಬೈಂದೂರು ತಾಲೂಕು  ಬಡಾಕೆರೆ ವ್ಯಾಪ್ತಿಯಲ್ಲಿ ಅನಧಿಕೃತ ಮರಳುಗಾರಿಕೆಯನ್ನು ನಡೆಸುತ್ತಿದ್ದವರು ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ಸ್ಥಗಿತಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅನಧಿಕೃತ ಮರಳು ಗಣಿಗಾರಿಕೆಗೆ ದಕ್ಕೆ ಹಾಗೂ ಸಾಗಾಣಿಕೆಗೆ ರಸ್ತೆಯನ್ನು ಕೆಲವು ಖಾಸಗಿ (ಪಟ್ಟಾ) ಜಾಗಗಳಲ್ಲಿ ನೀಡಿರುವುದು ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಕಂಡುಬಂದಿದ್ದು, ಅಂತಹ ಜಾಗದ ಪಟ್ಟಾದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭೂವಿಜ್ಞಾನಿಯವರು ತಿಳಿಸಿರುತ್ತಾರೆ.

ಭೂವಿಜ್ಞಾನಿ ಯವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ  ಅನಧಿಕೃತ ಮರಳು ಸಾಗಾಣಿಕೆಗೆ ಬಳಸುತ್ತಿದ್ದ ಸದರಿ  ಲಾರಿಗಳನ್ನು  ಗಂಗೊಳ್ಳಿ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು