8:41 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ

25/09/2022, 18:02

ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ. ಬಂಟ್ವಾಳ ತಾಲೂಕಿನ ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಇದರಿಂದ ಈ ಪರಿಸರದ ಜನತೆಯಲ್ಲಿ ಆತಂಕ ಉಂಟು ಮಾಡಿದೆ.

ಮಾರಿಪಳ್ಳದ ನಿವಾಸಿ ರಫೀಕ್ ಎಂಬವರು ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಫರಂಗಿಪೇಟೆ ಸಮೀಪದ 10ನೇ ಮೈಲುಗಲ್ಲು ಬಳಿ ಚಿರತೆಯೊಂದನ್ನು ನೋಡಿದ್ದಾಗಿ ತಿಳಿಸಿದ್ದಾರೆ.

ಹತ್ತನೇ ಮೈಲುಗಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಚಿರತೆಯನ್ನು ನೋಡಿದ್ದು ಕೂಡಲೇ ಅದು ಹೆದ್ದಾರಿ ಪಕ್ಕದ ಖಾಲಿ ಜಾಗದಲ್ಲಿ ಓಡಿದೆ ಎಂದು ತಿಳಿಸಿದ್ದಾರೆ.

ಚಿರತೆಯ ಬಗ್ಗೆ ಅವರು ಪಕ್ಕದ ಹೊಟೇಲ್ ಒಂದರಲ್ಲಿದ್ದ ಸ್ಥಳೀಯರಲ್ಲಿ ಮಾಹಿತಿ ನೀಡಿದ್ದು ಬಳಿಕ ಈ ಸುದ್ದಿ ಪರಿಸರದಲ್ಲಿ ಹರಿದಾಡಿದ್ದರಿಂದ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಫರಂಗಿಪೇಟೆ ಸಮೀಪದ ವಳಚ್ಚಿಲ್ ಪದವು ಎಂಬಲ್ಲಿನ ಜನರು ಶನಿವಾರ ಬೆಳಗ್ಗೆ ಪರಿಸರದಲ್ಲಿ ಚಿರತೆಯೊಂದನ್ನು ನೋಡಿದ್ದ ಬಗ್ಗೆ ಸುದ್ದಿ ತಿಳಿದು ಬಂದಿದೆ. ಅದೇ ಚಿರತೆ ರಾತ್ರಿ ಹತ್ತನೇ ಮೈಲುಗಲ್ಲಿನಲ್ಲಿ ಕಂಡುಬಂದಿರಬಹುದು ಎಂದು ಸ್ಥಳೀಯ ಜನರು ತಿಳಿಸಿದ್ದಾರೆ‌.

ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಪುದು ಗ್ರಾಮ ಪಂಚಾಯತ್‌ ಅಧ್ಯಕ್ಷ ರಮ್ಲಾನ್‌ ಮಾರಿಪಳ್ಳ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು