12:38 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ನವರಾತ್ರಿ ಹಬ್ಬ: ಸೆ.28ರಿಂದ ದ.ಕ. ಜಿಲ್ಲೆಯ ಶಾಲಾ ಮಕ್ಕಳಿಗೆ ದಸರಾ ರಜೆ

26/09/2022, 23:50

ಮಂಗಳೂರು(reporterkarnataka.com): 2022-23ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಮನವಿಗಳನ್ನು ಪರಿಗಣಿಸಿ ಹಾಗೂ 2022ರ ಸೆ.24ರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಸೂಚನೆಯಂತೆ ಸೆ.28ರಿಂದ ಅಕ್ಟೋಬರ್ 1ರ ವರೆಗೆ ಹೆಚ್ಚುವರಿಯಾಗಿ (4ದಿನಗಳು) ಷರತ್ತಿಗೊಳಪಟ್ಟು ದ.ಕ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ ಅವರು ದಸರಾ ರಜೆಯನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ಷರತ್ತು: ಅಕ್ಟೋಬರ್ 2ರಂದು ಮಹಾತ್ಮಾಗಾಂಧಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ಹೆಚ್ಚುವರಿಯಾಗಿ ನೀಡಿರುವ 4 ದಿನಗಳ ರಜೆಯನ್ನು 2022ರ ನವೆಂಬರ್ ತಿಂಗಳಿನಲ್ಲಿ 4 ಶನಿವಾರ ಪೂರ್ಣದಿನದ ತರಗತಿಗಳನ್ನು ಹಾಗೂ ಎರಡು ಭಾನುವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ಸರಿದೂಗಿಸುವಂತೆ ಆದೇಶಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು