12:41 AM Thursday16 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಕಣ್ಣೂರು: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ; ತುರ್ತು ಭೂಸ್ಪರ್ಶ, ಪ್ರಯಾಣಿಕರು ಪಾರು

27/09/2022, 12:22

ಕಣ್ಣೂರು(reporterkarnataka.com): ದೆಹಲಿಗೆ ತೆರಳಬೇಕಿದ್ದಏರ್‌ ಇಂಡಿಯಾ ವಿಮಾನವೊಂದಕ್ಕೆ ಟೇಕಾಪ್‌ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

135 ಪ್ರಯಾಣಿಕರಿದ್ದ ಟೇಕಾಫ್‌ ಆದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ಇಲ್ಲಿನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.ಪ್ರಯಾಣಿಕರಿಗೆ ಮತ್ತು ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಏರ್‌ ಇಂಡಿಯಾ ಅಧಿಕಾರಿಗಳು ಹೇಳಿದ್ದಾರೆ.

ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಕಾರಣ, ತಪಾಸಣೆ ಮತ್ತು ನಿರ್ವಹಣೆಗಾಗಿ ವಿಮಾನವನ್ನು ಇಳಿಸಲಾಯಿತು. ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಹಾಗೂ ವಿಮಾನಕ್ಕೂ ಯಾವುದೇ ಹಾನಿಯಾಗಿಲ್ಲ ಎಂದು ಏರ್ ಇಂಡಿಯಾದ ವಕ್ತಾರರು ತಿಳಿಸಿದ್ದಾರೆ.

ವಿದೇಶಗಳಿಗೆ ತೆರಳುವ ಪ್ರಯಾಣಿಕರಿಗೆ ಬೇರೆ ವಿಮಾನಗಳಲ್ಲಿ ತೆರಳಲು ಅವಕಾಶ ಕಲ್ಪಿಸಲಾಯಿತು. ದೆಹಲಿಗೆ ತೆರಳಬೇಕಿದ್ದ ಪ್ರಯಾಣಿಕರನ್ನು ಇಲ್ಲಿನ ಹೊಟೇಲ್‌ಗಳಲ್ಲಿ ಇರಿಸಲಾಗಿದ್ದು ಮಂಗಳವಾರ ಅವರ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಏರ್ ಇಂಡಿಯಾ ವಕ್ತಾರರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು