1:02 PM Monday5 - June 2023
ಬ್ರೇಕಿಂಗ್ ನ್ಯೂಸ್
ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10… ಕಡಲನಗರಿ ಕುಡ್ಲದಲ್ಲಿ 2 ದಿನಗಳ ‘ಹಲಸಿನ ಹಬ್ಬ’; ಜಾಕ್ ಫ್ರುಟ್ ಐಸ್ ಕ್ರೀಂ,… ಫಲ್ಗುಣಿ ನದಿಗೆ ರುಚಿ ಗೋಲ್ಡ್ ತ್ಯಾಜ್ಯ ವಿಸರ್ಜಿಸುವ ಕೊಳವೆ ಪತ್ತೆ: ನಾಗರಿಕ ಹೋರಾಟ… ಒಡಿಸ್ಸಾ ರೈಲು ದುರಂತ: ಕಳಸದಿಂದ ಸಮೇದ್ ಶಿಖರ್ಜಿ ಯಾತ್ರೆಗೆ ತೆರಳಿದ್ದ 110 ಮಂದಿ… ಇವರೇ ಅದೃಷ್ಟವಂತ 110 ಮಂದಿ ಕನ್ನಡಿಗರು!: ಒಡಿಶಾದಲ್ಲಿ ಭೀಕರ ದುರಂತಕ್ಕೀಡಾದ ರೈಲಿನ ಪ್ರಯಾಣಿಕರು;… ಒಡಿಶಾ: ಭೀಕರ ರೈಲು ದುರಂತ; ಕರ್ನಾಟಕದ 110 ಮಂದಿ ಕನ್ನಡಿಗ ಪ್ರಯಾಣಿಕರು ಸೇಫ್ ಲೋಕಸಭೆ ಚುನಾವಣೆ: ನಳಿನ್, ಡಿವಿ, ಮಂಗಳಾ ಅಂಗಡಿ ಸಹಿತ 10ಕ್ಕೂ ಹೆಚ್ಚು ಸಂಸದರು… ಮಾಣಿ: ಬಾಲವಿಕಾಸ ಅಂಗ್ಲ ಮಾಧ್ಯಮ ಶಾಲೆ ಕಚೇರಿ ಉದ್ಘಾಟನೆ; ವೆಲ್ ಕಮ್ ಡೇ… 5 ಲಕ್ಷ ರೂ. ವಂಚನೆ ಪ್ರಕರಣ: ಪೋಲಿಸ್ ಕಾನ್ ಸ್ಟೇಬಲ್ ಸಹಿತ 3… ಮುಡಾ ಉದ್ಯೋಗಿ ನೇಣಿಗೆ ಶರಣು: ಅನಾರೋಗ್ಯದಿಂದ ಬೇಸೆತ್ತು ಆತ್ಮಹತ್ಯೆ?

ಇತ್ತೀಚಿನ ಸುದ್ದಿ

ಭೂತಾನ್ ನಿಂದ 17 ಸಾವಿರ ಟನ್  ಅಡಕೆ ಆಮದು: ರೈತರಲ್ಲಿ ಆತಂಕ ಬೇಡವೆಂದ ಗೃಹ ಸಚಿವರು

01/10/2022, 01:21

ಬೆಂಗಳೂರು(reporterkarnataka.com): ನೆರೆಯ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಕೆಗೆ ಮಾತ್ರ ಅನುಮತಿ ನೀಡಲಾಗಿದೆ ಎಂದರು. 

ನೆರೆಯ ಭೂತಾನ್ ದೇಶವು, ಭಾರತದ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ. ಅಡಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದುಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕದಲ್ಲಿದ್ದು, ಭೂತಾನ್ ಅಡಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು. ಬೆಳೆಗಾರರಿಗೆ ಯಾವುದೇ ಗೊಂದಲ ಆತಂಕ ಬೇಡ. ಈ ವಿಚಾರ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲು ಲೋಕಸಭಾ ಸದಸ್ಯರ ನೇತೃತ್ವದಲ್ಲಿ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಸಚಿವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು