8:08 PM Thursday2 - February 2023
ಬ್ರೇಕಿಂಗ್ ನ್ಯೂಸ್
ಸಮುದ್ರ ಗಡಿ ರಕ್ಷಣೆಯಲ್ಲಿ ಕೋಸ್ಟ್ ಗಾರ್ಡ್ ಸೇವೆ ಅನನ್ಯ: ರೈಸಿಂಗ್ ಡೇ ಸಮಾರಂಭದಲ್ಲಿ… ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಅಕ್ಷಯ್ ಶ್ರೀಧರ್ ವರ್ಗಾವಣೆ: ಚನ್ನಬಸಪ್ಪ ನೂತನ ಆಯುಕ್ತ ಅಭ್ಯರ್ಥಿಗಳ ಆಯ್ಕೆ: ಇಂದು ಕಾಂಗ್ರೆಸ್ ಮಹತ್ವದ ಸಭೆ; ಶೀಘ್ರದಲ್ಲೇ 150 ಮಂದಿಯ ಪಟ್ಟಿ… ಚಿಕ್ಕಮಗಳೂರು: ಕೈ ತೊರೆದು ಕಮಲ ಹಿಡಿದ ಕಾರ್ಯಕರ್ತನ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು ಕೇಂದ್ರ ಬಜೆಟ್: ಮೀನುಗಾರಿಕೆ ಅಭಿವೃದ್ಧಿಗೆ 6 ಸಾವಿರ ಕೋಟಿ, ಭದ್ರಾ ಮೇಲ್ದಂಡೆ ಯೋಜನೆಗೆ… ರಾಜಕೀಯ ಮುತ್ಸದ್ಧಿ, ಕೇಂದ್ರ ಮಾಜಿ ಕಾನೂನು ಸಚಿವ ಶಾಂತಿ ಭೂಷಣ್ ಇನ್ನಿಲ್ಲ ದ.ಕ. ಜಿಲ್ಲಾ ಎಸ್ಪಿ ಸೋನಾವಾಣೆ ಋಷಿಕೇಷ್ ವರ್ಗಾವಣೆ: ಅಮಾಥೆ ವಿಕ್ರಂ ನೂತನ ಪೊಲೀಸ್… ದೇವೇಗೌಡ ಕುಟುಂಬ ಬಗ್ಗೆ ಅವಹೇಳನ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ವಿರುದ್ಧ ಯುವ ಜೆಡಿಎಸ್… ಸಿಡಿ ಪ್ರಕರಣ ಸಿಬಿಐಗೆ ವಹಿಸಿ: ರಮೇಶ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಅಥಣಿ… ಫಾಝೀಲ್ ಕೊಲೆ ಪ್ರಕರಣ ಮರು ತನಿಖೆಯಾಗಲಿ; ಹಿಂಸೆಗೆ ಪ್ರಚೋದಿಸುವವರ ಗಡಿಪಾರು ಮಾಡಿ: ಪ್ರತಿಪಕ್ಷದ…

ಇತ್ತೀಚಿನ ಸುದ್ದಿ

ಹೊಸ ವರ್ಷಾಚರಣೆ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಮಂಗಳೂರು ಪೊಲೀಸ್ ಕಮಿಷನರ್

02/12/2022, 21:40

ಮಂಗಳೂರು(reporterkarnataka.com): ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆ ಹಾಗೂ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನ ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ.
ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸುವ ನಗರದ ಎಲ್ಲ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಮಾಲೀಕರು, ವ್ಯವಸ್ಥಾಪಕರು, ಆಡಳಿತ ವರ್ಗದವರು (ಒಳಾವರಣದಲ್ಲಿ ಮಾತ್ರ) ಈ ಬಗ್ಗೆ ಕಡ್ಡಾಯವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಗೆ ಅರ್ಜಿ ಸಲ್ಲಿಸಿ, ಪೂರ್ವಾನುಮತಿ ಪಡೆದುಕೊಳ್ಳಬೇಕು.

ಡಿ.31ರ ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸಲು ಡಿ.15ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಿ ಪೂರ್ವಾನುಮತಿ ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ನೂತನ ವರ್ಷಾಚರಣೆಯ ಆಚರಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಕಾರ್ಯಕ್ರಮದ ಧ್ವನಿವರ್ಧಕವನ್ನು ರಾತ್ರಿ 10
ಗಂಟೆಯೊಳಗೆ (ಒಳಾವರಣದಲ್ಲಿ) ಮುಕ್ತಾಯಗೊಳಿಸುವುದು.

ರೆಸ್ಟೋರೆಂಟ್ ಮತ್ತು ಮದ್ಯಪಾನ ಸರಬರಾಜು ಮಾಡುವ ಹೋಟೆಲ್‌ಗಳಲ್ಲಿ ಸರ್ಕಾರವು ನಿಗದಿಪಡಿಸಿದ ಸಮಯಕ್ಕಿಂತ ಹೆಚ್ಚಿನ ಸಮಯದಲ್ಲಿ ನೂತನ ವರ್ಷಾಚರಣೆಯ ಸಂಬಂಧ ಮದ್ಯ ವಿತರಿಸಲು ಉದ್ದೇಶಿಸಿದಲ್ಲಿ ಅಬಕಾರಿ
ಇಲಾಖೆಯಿಂದ ಲಿಖಿತವಾಗಿ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು, ಅಬಕಾರಿ ಇಲಾಖೆಯಿಂದ ಅನುಮತಿ
ಪಡೆದಿದ್ದರೂ ಸಹ ಮದ್ಯ ವಿತರಣೆಯನ್ನು ರಾತ್ರಿ 11 ಗಂಟೆಯೊಳಗೆ ಮುಕ್ತಾಯಗೊಳಿಸಬೇಕು.

ಸಾರ್ವಜನಿಕ ಸ್ಥಳಗಳಲ್ಲಿ ಏರ್ಪಡಿಸಲಾಗಿರುವ ಹೊಸ
ವರ್ಷಾಚರಣೆಯ ಕಾರ್ಯಕ್ರಮ ಹಾಗೂ ಇನ್ನಿತರೆ ನೆಪದಲ್ಲಿ ಬಸ್ಸು ತಂಗುದಾಣ, ಸಾರ್ವಜನಿಕ ಉದ್ಯಾನವನಗಳು,ಕ್ರೀಡಾಂಗಣಗಳಲ್ಲಿ, ರೈಲ್ವೇ
ಸ್ಟೇಷನ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ,
ಮದ್ಯಪಾನ ಮಾಡುವುದನ್ನು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಕರು ಡಿ.31ರ ರಾತ್ರಿ ಹೊಸ ವರ್ಷಾಚರಣೆಯ ನೆಪದಲ್ಲಿ ಯಾವುದೇ ಕಾರಣಕ್ಕೂ ರಸ್ತೆಗಳಲ್ಲಿ ಅಸಭ್ಯವಾಗಿ ವರ್ತಿಸಬಾರದು.

ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಧ್ವನಿವರ್ಧಕವನ್ನು ಅಳವಡಿಸುವವರು ತಮ್ಮ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರುವಂತೆ ಬಾಕ್ಸ್
ಮಾದರಿ ಧ್ವನಿವರ್ಧಕವನ್ನು ಅಳವಡಿಸಿಕೊಂಡು ಕಡಿಮೆ ಧ್ವನಿಯಲ್ಲಿ ಕಾರ್ಯಕ್ರಮವನ್ನು ನಡೆಸಬೇಕು. ಧ್ವನಿವರ್ಧಕದ ಧ್ವನಿ ಪ್ರಮಾಣವು ದಿ ನ್ವಾನ್ ಪೋಲ್ಯೂಶನ್ (ರೆಗ್ಯುಲೇಶನ್ಆ್ಯಂಡ್ ಕಂಟ್ರೋಲ್) ರೂಲ್ಸ್
2000ರಲ್ಲಿ ನಿಗದಿಪಡಿಸಲಾದ ಪ್ರಮಾಣವನ್ನು ಯಾವುದೇ ಕಾರಣಕ್ಕೂ ಮೀರಬಾರದು.

ಹೊಸ ವರ್ಷಾಚರಣೆಯನ್ನು ನಡೆಸಲು ಹೋಟೇಲ್,ಕ್ಲಬ್ ಅಥವಾ ವಿಶೇಷ ಕೂಟಗಳ ವ್ಯವಸ್ಥಾಪಕರು ಯಾವುದೇ ಅಹಿತಕರ ಘಟನೆ ನಡೆಯದಂತೆ
ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು.
ಸಾರ್ವಜನಿಕ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸದೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು.18 ವರ್ಷ ಕೆಳಗಿನವರಿಗೆ ಕಡ್ಡಾಯವಾಗಿ
ಮದ್ಯ ವಿತರಿಸಕೂಡದು.

ಪೋಷಕರು ಜೊತೆಯಲ್ಲಿ ಇರದ ಪಕ್ಷದಲ್ಲಿ 18 ವರ್ಷ ಕೆಳಗಿನ ಪ್ರಾಪ್ತರಿಗೆ ಯಾವುದೇ ಕಾರಣಕ್ಕೂ ಕಾರ್ಯಕ್ರಮಗಳಿಗೆ ಪ್ರವೇಶವನ್ನುನಿರ್ಬಂಧಿಸಬೇಕು.
ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ ಅಥವಾ ಅಶ್ಲೀಲ ನೃತ್ಯ, ಜೂಜಾಟ
ನಡೆಸುವುದನ್ನು ನಿಷೇಧಿಸಲಾಗಿದೆ. ಹೆಣ್ಣು ಮಕ್ಕಳಿಗೆ ಮತ್ತು ಮಹಿಳೆಯರಿಗೆ
ಶುಭಕೋರುವ ನೆಪದಲ್ಲಿ ಕೀಟಲೆ, ಅಸಭ್ಯವಾಗಿ ವರ್ತಿಸುವುದನ್ನು
ತಡೆಯಲು ಕಾರ್ಯಪಡೆ ತಂಡಗಳನ್ನು ರಚಿಸಲಾಗಿದೆ. ಸದ್ರಿ ಕಾರ್ಯಪಡೆಯು ನಗರದ ಅಲ್ಲಲ್ಲಿ ಕಾರ್ಯನಿರತವಾಗಿದ್ದು ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

ರಸ್ತೆಯಲ್ಲಿ ಅನಾವಶ್ಯಕವಾಗಿ ಓಡಾಡುವ ಸಾರ್ವಜನಿಕರನ್ನು ಬಲವಂತವಾಗಿ ನಿಲ್ಲಿಸಿ ಅವರ ಇಚ್ಛೆಗೆ ವಿರುದ್ಧವಾಗಿ ಶುಭಕೋರುವ ನೆಪದಲ್ಲಿ ಕಿರಿಕಿರಿ ಮಾಡಬಾರದು. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾ ವಹಿಸಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ
ಕಾರ್ಯಪಡೆ ರಚಿಸಲಾಗಿದೆ.ಈ ಕಾರ್ಯಪಡೆಯಲ್ಲಿ ಮಂಗಳೂರು ನಗರದ ಎಲ್ಲಾ ಪ್ರದೇಶಗಳಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ
ಸೂಕ್ತ ಕ್ರಮ ಜರುಗಿಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು