ಇತ್ತೀಚಿನ ಸುದ್ದಿ
ಹೆಜಮಾಡಿ ಟೋಲ್ ಹೋರಾಟ: ಸಾರ್ವಜನಿಕ ಆಸ್ತಿಪಾಸ್ತಿ, ಸಂಚಾರಕ್ಕೆ ಅಡ್ಡಿಯುಂಟು ಮಾಡಿದರೆ ಕಠಿಣ ಕ್ರಮ: ಎಸ್ಪಿ ಎಚ್ಚರಿಕೆ
03/12/2022, 10:35

ಉಡುಪಿ(reporterkarnataka.com): ಹೆಜಮಾಡಿ ಟೋಲ್ ನಲ್ಲಿ ಶುಲ್ಕ ಹೆಚ್ಚಳ ವಿರೋಧಿಸಿ ಟೋಲ್‌ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಹೋರಾಟಕ್ಕೆಕರೆ ನೀಡಿವೆ.
ಈ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ, ಕಾಪುವಿನಲ್ಲಿ ನಾವು ಸಭೆ ನಡೆಸಿ ಟೋಲ್‌ಗೇಟ್ ಹೋರಾಟ ಸಮಿತಿಯವರಿಗೆ ಶಾಂತಿಯುತ ಪ್ರತಿಭಟನೆ ಮಾಡುವಂತೆ ಸೂಚನೆ ನೀಡಿದ್ದೇವೆ. ಹಾಗಾಗಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿಗೆ ಧಕ್ಕೆ ತರತದಂತೆ ಶಾಂತಿಯುತ ಪ್ರತಿಭಟನೆ ಮಾಡಬೇಕು. ಒಂದುವೇಳೆ ಸಾರ್ವಜನಿಕ ಆಸ್ತಿಪಾಸ್ತಿ, ಸಂಚಾರಕ್ಕೆ ತೊಂದರೆಯಾದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.