7:54 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಗುಜರಾತ್ ವಿಧಾನಸಭೆ ಚುನಾವಣೆ: ಹೊಸ ದಾಖಲೆ ಬರೆದ ಬಿಜೆಪಿ; ಡಿ.12ರಂದು ನೂತನ ಸರಕಾರ ಅಧಿಕಾರಕ್ಕೆ

09/12/2022, 09:25

ಅಹಮ್ಮದಾಬಾದ್(reporterkarnataka.com): 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿರುವ ಬಿಜೆಪಿ ಸತತ 7ನೇ ಅವಧಿಗೆ ಗುಜರಾತ್‌ನಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ. ಗುಜರಾತ್‌ನ ನೂತನ ಸರ್ಕಾರ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದೆ. ಕಾಂಗ್ರೆಸ್ 1985 ರಲ್ಲಿ 149 ಸ್ಥಾನಗಳನ್ನು ಗೆದ್ದಿತ್ತು. ಇದು ಹಿಂದಿನ ದಾಖಲೆಯಾಗಿತ್ತು.
182 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಪಡೆದುಕೊಂಡಿದೆ. ಕಾಂಗ್ರೆಸ್ ಮತ್ತು ಎಎಪಿ ತೀರಾ ಹಿಂದುಳಿದಿದ್ದು ಕ್ರಮವಾಗಿ 17 ಮತ್ತು 5 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಗುಜರಾತ್ ಚುನಾವಣೆಯಲ್ಲಿ ತಮ್ಮ ಪ್ರದರ್ಶನದ ನಂತರ ರಾಷ್ಟ್ರೀಯ ಪಕ್ಷವೆಂದು ಗುರುತಿಸಲಾಗಿದೆ ಎಂದು ಎಎಪಿ ಹೇಳಿಕೊಂಡಿದೆ.

ಡಿಸೆಂಬರ್ 1 ಮತ್ತು 5 ರಂದು ಚುನಾವಣೆ ನಡೆದಿದ್ದು, ಗುಜರಾತ್ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು