11:13 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಜನರ ಮತ್ತು ಸರಕಾರದ ಮಧ್ಯೆ ಸೇತುವೆಯಾಗಿ ಮಾಧ್ಯಮಗಳು ಕೆಲಸ‌ ಮಾಡುತ್ತಿದೆ: ಉದ್ಯಮಿ ಪ್ರಕಾಶ್ ಶೆಟ್ಟಿ

03/01/2023, 14:55

ಮಂಗಳೂರು(reporterkarnataka.com): ಸಮಾಜದ ಅಭಿವೃದ್ಧಿಗೆ ಪತ್ರಕರ್ತರ ಕೊಡುಗೆಗಾಗಿ ಶ್ರೇಷ್ಠವಾದುದು.
ಜನ ಸಾಮಾನ್ಯರ ಮತ್ತು ಸರಕಾರದ ಮಧ್ಯೆ ಸೇತುವೆಯಾಗಿ ಮಾಧ್ಯಮಗಳು ಕೆಲಸ‌ ಮಾಡುತ್ತಿದೆ
ಎಂದು ಎಂಆರ್‌ಜಿ ಗ್ರೂಪ್ ಆಡಳಿತ ನಿರ್ದೇಶಕ ಪ್ರಕಾಶ್ ಶೆಟ್ಟಿ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಪತ್ರಕರ್ತರ ಜಿಲ್ಲಾ ಸಮ್ಮೇಳನ -2023 ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನನ್ನ ಎಲ್ಲಾ ಬೆಳವಣಿಗೆಗೆ ಪತ್ರಕರ್ತರು ಸದಾ ಬೆನ್ನೆಲುಬಾಗಿ ನಿಂತು ಸಹಕಾರ ನೀಡಿದ್ದಾರೆ. ಉದ್ಯಮದ‌ ಬೆಳವಣಿಗೆಗೆ ಪತ್ರಕರ್ತರು ದೊಡ್ಡ ಸಹಾಯ ನೀಡಿದ್ದಾರೆ ಎಂದು ಅವರು ನುಡಿದರು.

ಪತ್ರಕರ್ತರ ಕ್ಷೇಮ ನಿಧಿಗೆ ಚಾಲನೆ ನೀಡಿ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರ ‘ಭಾವ ಚಿತ್ರ ಯಾನ -2’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್‌ ಕುಮಾರ್ ಕಟೀಲ್
‘ಪತ್ರಕರ್ತರಿಗೆ ನಿವೇಶನ ಬೇಡಿಕೆ ಗಮನದಲ್ಲಿದೆ. ಮುಖ್ಯ ಮಂತ್ರಿ ಹಾಗೂ ಕಂದಾಯ ಸಚಿವರ ಜೊತೆ ಮಾತನಾಡಿ ಪತ್ರಕರ್ತರಿಗೆ ನಿವೇಶನ ಒದಗಿಸಲು ಪ್ರಯತ್ನ ನಡೆಸಲಾಗುವುದು ಎಂದರು. ಪತ್ರಕರ್ತರ ಗ್ರಾಮ ವಾಸ್ತವ್ಯ ಮಾದರಿ ಕಾರ್ಯಕ್ರಮ. ಈ ಕಾರ್ಯಕ್ರಮದ ಮಾದರಿಯಲ್ಲಿ ರಾಜ್ಯ ಸರಕಾರವು ಗ್ರಾಮ‌ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಜಿಲ್ಲೆಯ ಅಭಿವೃದ್ಧಿಯ ಹಿನ್ನಲೆಯಲ್ಲಿ ಪತ್ರಕರ್ತರು ಸಹಕಾರ‌ ನೀಡಬೇಕು ಎಂದು ಅವರು ಹೇಳಿದರು‌.
ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೆನಪಿನ ಸಂಚಿಕೆ ‘ಮಾಧ್ಯಮ’ವನ್ನು ಬಿಡುಗಡೆ ಮಾಡಿದ ವಿಧಾನ ಸಭೆಯ ಪ್ರತಿಪಕ್ಷ ಉಪನಾಯಕ ಶಾಸಕ ಯು. ಟಿ .ಖಾದರ್ ಮಾತನಾಡಿ
‘ಪತ್ರಕರ್ತರ ಮತ್ತು ರಾಜಕೀಯ ವ್ಯಕ್ತಿಗಳ ಮಧ್ಯೆ ಅನನ್ಯ ಮತ್ತು ಸಹೋದರ ಸಂಬಂಧ ಇದೆ.

ಸೌಹಾರ್ಧಯುತ ಮತ್ತು ಪ್ರಬುದ್ಧ ಸಮಾಜ ನಿರ್ಮಿಸಿ, ಸಮಾಜದ‌ ಎಲ್ಲರನ್ನೂ ಜೋಡಿಸುವ ಕೆಲಸವನ್ನು ಪತ್ರಿಕಾ ರಂಗ ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲಾಗುತಿದೆ. ತಮ್ಮ ಕೆಲಸದ ಒತ್ತಡದ ನಡುವೆಯೂ ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕ ದಕ್ಷಿಣ ಕನ್ನಡದ ಪತ್ರಕರ್ತರು ಮಾದರಿಯಾಗಿದ್ದಾರೆ ಎಂದು ಹೇಳಿದರು.
ಸಮ್ಮೇಳನದ ಅಧ್ಯಕ್ಷತೆಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಅಧ್ಯಕ್ಷ ಸದಾಶಿವ ಶೆಣೈ ವಹಿಸಿ ಮಾತನಾಡಿ ಮಾಧ್ಯಮ ಕವಲು ದಾರಿಯಲ್ಲಿದೆ. ಪತ್ರಿಕೋದ್ಯಮಕ್ಕೆ ಭವ್ಯವಾದ ಪರಂಪರೆ ಇದೆ. ಈ ಪರಂಪರೆಯನ್ನು ಮುಂದುವರಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಮಾದರಿಯಾಗಿ ಕಾರ್ಯನಿರ್ಚಹಿಸುತಿದ್ದಾರೆ ಎಂದು ಹೇಳಿದರು. ಮಾಧ್ಯಮ ಅಕಾಡೆಮಿಯ ವತಿಯಿಂದ ಹಿರಿಯ ಪತ್ರಕರ್ತರದು ಸೇರಿ 40 ಪುಸ್ತಕಗಳನ್ನು ಹೊರ ತರಲಿದೆ ಎಂದು ಹೇಳಿದರು.

ಪತ್ರಕರ್ತ ವಿಕ್ರಂ ಕಾಂತಿಕೆರೆಯವರ ಕೃತಿ ‘ಕಾವೇರಿ ತೀರದ ಪಯಣ’ ಕೃತಿ ಯನ್ನು ಶಾಸಕರಾದ ವೇದವ್ಯಾಸ ಕಾಮತ್ ಬಿಡುಗಡೆ ಮಾಡಿದರು.
ಛಾಯಾಚಿತ್ರ ಪ್ರದರ್ಶನವನ್ನು ಶಾಸಕ ಡಾ.ವೈ.ಭರತ್ ಶೆಟ್ಟಿ ಉದ್ಘಾಟಿಸಿದರು.
ಬಿಜೈ- ಕಾಪಿಕಾಡ್ ಅಂಗನವಾಡಿ ಮಕ್ಕಳಿಗೆ ಕ್ರೀಡಾ ಪರಿಕರಗಳನ್ನು ಉದ್ಯಮಿ ಸಾಂಬಶಿವರಾವ್ ವಿತರಣೆ ಮಾಡಿದರು.
ಪತ್ರಕರ್ತರ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪಟ್ಲ ಫೌಂಡೇಷನ್‌ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಚಾಲನೆ ನೀಡಿದರು.
ಪರಿಸರ ಸ್ನೇಹಿ ಯೋಜನೆಗೆ ಗುರ್ಮೆ ಫೌಂಡೇಶನ್‌ನ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಶುಭ ಹಾರೈಸಿದರು‌. ಮಂಗಳೂರು ಮೇಯರ್ ಜಯಾನಂದ‌ ಅಂಚನ್, ಮಂಗಳೂರು ವಿವಿ ಉಪಕುಲಪತಿಗಳಾದ ಪ್ರೊ.ಪಿ.ಎಸ್. ಯಡಪಡಿತ್ತಾಯ,
ಬ್ಯಾಂಕ್ ಆಫ್ ಬರೋಡಾದ‌ ಪ್ರಾದೇಶಿಕ ಮುಖ್ಯಸ್ಥರಾದ ಗಾಯತ್ರಿ, ಕೆಐಒಸಿಎಲ್‌ನ ನಿರ್ದೇಶಕರಾದ ಮುರುಗೇಶ್, ಮುಂಬೈ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್, ರವೀಂದ್ರ ಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ‌ ಅಡ್ಕಸ್ಥಳ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್,ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು,ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಆರಿಫ್ ಪಡುಬಿದ್ರೆ,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ‌ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.
ರಾಷ್ಟ್ರೀಯ ಪತ್ರಿಕಾ ಮಂಡಳಿ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.

ಆಕರ್ಷಕ ಮೆರವಣಿಗೆ:
ಉದ್ಘಾಟನೆಗೆ ಮುನ್ನ ಆಕರ್ಷಕ ಮೆರವಣಿಗೆಯ ಮೂಲಕ ಅತಿಥಿಗಳನ್ನು ವೇದಿಕೆಗೆ ಕರೆ ತರಲಾಯಿತು. ಪತ್ರಿಕೆ, ಮ್ಯಾಗಜಿನ್‌‌ ಲೋಗೋ, ವಿವಿಧ ಧರ್ಮಗಳ ಗ್ರಂಥಗಳನ್ನು ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆಯಲ್ಲಿ ತರಲಾಯಿತು. ಚೆಂಡೆ, ವಾದ್ಯ, ಮೇಳಗಳು ಮೆರವಣಿಗೆಗೆ ಸಾಥ್ ನೀಡಿತು.

ಇತ್ತೀಚಿನ ಸುದ್ದಿ

ಜಾಹೀರಾತು