ಇತ್ತೀಚಿನ ಸುದ್ದಿ
ದ.ಕ. ಜಿಲ್ಲಾ ಎಸ್ಪಿ ಸೋನಾವಾಣೆ ಋಷಿಕೇಷ್ ವರ್ಗಾವಣೆ: ಅಮಾಥೆ ವಿಕ್ರಂ ನೂತನ ಪೊಲೀಸ್ ವರಿಷ್ಠಾಧಿಕಾರಿ
31/01/2023, 23:34

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನಾವಾಣೆ ಋಷಿಕೇಷ್ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಋಷಿಕೇಷ್ ಅವರನ್ನು ಗುಪ್ತಚರ ವಿಭಾಗದ ಎಸ್ ಪಿ ಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಎಸ್ ಪಿ ಆಗಿ ಅಮಾಥೆ ವಿಕ್ರಮ್ ಅವರನ್ನು ನೇಮಕ ಮಾಡಲಾಗಿದೆ. ಅಮಾಥೆ ವಿಕ್ರಮ್ ಅವರು ಗುಪ್ತಚರ ವಿಭಾಗದ ಎಸ್ ಪಿ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಕೂಡ ಶುರುವಾಗಿದೆ.